ಬೆಂಗಳೂರು: ವಿಪಕ್ಷಗಳ ಮಹಾಮೈತ್ರಿಕೂಟದ ಸಭೆಗೆ IASಗಳ ನಿಯೋಜನೆ ವಿಚಾರಕ್ಕೆ ಸಂಬಂಧಿಸಿ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
IAS ಅಧಿಕಾರಿಗಳನ್ನು ಸ್ವಾಗತ ಕೋರಲು ಬಳಸಿಕೊಂಡಿದ್ದು ಸರಿಯಲ್ಲ. ಕಾಂಗ್ರೆಸ್ ಆರ್ಭಟ ನೋಡಿದ್ರೆ ಇಡೀ ದೇಶವನ್ನೇ ಗೆದ್ದ ರೀತಿ ಆಡ್ತಿದೆ. ಮುಂದಿನ ದಿನದಲ್ಲಿ ಬಿಜೆಪಿ ಇದಕ್ಕೆ ಉತ್ತರ ಕೊಡಲಿದೆ.
ಕಾಂಗ್ರೆಸ್ ಆಡಳಿತದಲ್ಲಿ ಐಎಎಸ್ ಅಧಿಕಾರಿಗಳು ಅಸಹಾಯಕರಾಗಿದ್ದಾರೆ. ಅಧಿಕಾರಿಗಳು ಮಾತ್ರವಲ್ಲ ಜನರು ಕೂಡ ಅಸಹಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದ ಅಮಲಿನಲ್ಲಿ ಮುಳುಗಿ ಹೋಗಿದೆ ಎಂದು ವಾಗ್ದಾಳಿ ನಡೆಸಿದರು.