ಬೆಂಗಳೂರು:- ಬರ ಪರಿಹಾರ ಕೊಡಿಸುವಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಸಂಬಂಧ ಮಾತನಾಡಿದ ಅರವಿಂದ್ ಬೆಲ್ಲದ್, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ಮ ಅಬಕಾರಿ ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಆದರೂ ಈ ವರ್ಷ 18 ಸಾವಿರ ಕೋಟಿ ರೂ. ಆದಾಯ ಸಂಗ್ರಹ ಆಗಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.
ಬೋರ್ವೆಲ್ ಕೊರೆಸಲು ಇವರ ಬಳಿ ಹಣವಿಲ್ಲ. ಈಗ ನೀರಿಲ್ಲ ಹೀಗಾಗಿ ಈ ಎಲ್ಲಾ ನಾಟಕ ಮಾಡುತ್ತಿದ್ದಾರೆ. ವರ್ಗಾವಣೆ ದಂಧೆ ಬಿಟ್ಟು ಸರಿಯಾಗಿ ಆಡಳಿತ ಮಾಡಲಿ. ಈ ಎಲ್ಲಾ ನಾಟಕ ಬೇಡ ಎಂದು ಕಿಡಿಕಾರಿದ್ದಾರೆ.