ಬೆಂಗಳೂರು ;– ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದ ಹಿನ್ನೆಲೆಯಲ್ಲಿ ಜೂನ್ 20ರಂದು ಅಂದರೆ ನಾಳೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಜಿಲ್ಲಾ ಘಟಕಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮುಂದಿನ ಹಂತದಲ್ಲಿ ಬ್ಲಾಕ್ ಮಟ್ಟದಲ್ಲಿಯೂ ಪ್ರತಿಭಟನೆ ನಡೆಸಬೇಕು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದೆ. ಹೀಗಾಗಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ,
10 ಕೆಜಿ ಅಕ್ಕಿ ನೀಡುವುದಾಗಿ ಹೇಳಿಕೊಂಡಿದ್ದ ಎಫ್ಸಿಐ ನಂತರ ಅಕ್ಕಿ ನೀಡಲು ಹಿಂದೇಟು ಹಾಕಿದೆ. ಹೀಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿಗೆ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ನಾಳೆ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ.