ಬೆಂಗಳೂರು: ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತರಬೇಕೆಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಆಗ್ರಹಿಸಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ‘ ಭರವಸೆ ನೀಡಿದಂತೆ ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡಬೇಕು ಎಂದರು.
ಹಾಗೆ ನಮ್ಮ ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಯಾರೂ ಹೇಳಿಕೆ ಕೊಡಬಾರದು.ಪಕ್ಷದ ಹೊರಗಡೆ ಯಾವುದೇ ಹೇಳಿಕೆ ಕೊಡದಂತೆ ನಾವು ಎಚ್ಚರಿಕೆ ನೀಡಿದ್ದೇವೆ ಮುಂದೆ ಏನಾದರೂ ಈ ರೀತಿ ಹೇಳಿಕೆ ನೀಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.