ಸಚಿವ ಈಶ್ವರಪ್ಪ ವಜಾಗೆ ಆಗ್ರಹಿಸಿ ಫೆಬ್ರವರಿ 21ರವರೆಗೆ ಅಹೋರಾತ್ರಿ ಧರಣಿಗೆ ಕಾಂಗ್ರೆಸ್ ನಿರ್ಧಾರ

ಬೆಂಗಳೂರು

ಬೆಂಗಳೂರು: ಸಚಿವ ಸಂಪುಟದಿಂದ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕೈಬಿಡಲು ಆಗ್ರಹಿಸಿ, ಮಂಡಿಸಲಾದ ನಿಲುವಳಿ ಸೂಚನೆಯನ್ನು ವಿಧಾನಸಭಾಧ್ಯಕ್ಷರು ತಿರಸ್ಕರಿಸಿದ ಬೆನ್ನಲ್ಲೇ, ಕಾಂಗ್ರೆಸ್ ಮುಖಂಡರು ಸಚಿವ ಈಶ್ವರಪ್ಪ ಅವರ ವಿರುದ್ಧ ಸಿಡಿದೆದ್ದಿದ್ದಾರೆ. ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಸದನದಲ್ಲಿ, ಅಹೋರಾತ್ರಿ ಧರಣಿ ನಡೆಸುತ್ತಿರುವ ಪ್ರತಿಭಟನೆಯನ್ನು ಫೆಬ್ರವರಿ 21ರವರೆಗೆ ಮುಂದುವರೆಸುವುದಾಗಿ ಕಾಂಗ್ರೆಸ್ ಹೇಳಿದೆ. ಈ ಸಂಬಂಧ ವಿಧಾನಸಭೆಯ ವಿಪಕ್ಷ ಮುಖ್ಯ ಸಚೇತಕ ಅಜಯ್ ಸಿಂಗ್ ಪತ್ರ ಕೂಡಾ ಬರೆಯಲಾಗಿದೆ.  ಅಲ್ಲದೇ ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸುವಂತೆ ವಿಪ್ ಕೂಡ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *