ಜಬಲ್ಪುರ: ಕರ್ನಾಟಕದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಹೇಳಿದ್ದಾರೆ. ಕರ್ನಾಟಕ ಚುನಾವಣೆ ಕುರಿತಂತೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಿಂದ ಅಧಿಕಾರವನ್ನು ಕಾಂಗ್ರೆಸ್ ಕಸಿದುಕೊಳ್ಳಲಿದೆ ಎಂದರು.
ವಿರೋಧ ಪಕ್ಷಗಳ ಮೈತ್ರಿ ಕುರಿತು ಒಂದು ಸಾಮಾನ್ಯ ಕಾರ್ಯಸೂಚಿ ಇರಬೇಕು. ಎಲ್ಲಾ ಪಕ್ಷಗಳು ಒಗ್ಗೂಡಬೇಕು ಮತ್ತು ಅಂತಹ ಮೈತ್ರಿಕೂಟ ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ವೈಯಕ್ತಿಕವಾಗಿ ಪ್ರಯತ್ನಿಸುತ್ತೇನೆ ಎಂದರು. 75 ರ ವಯಸ್ಸಿನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇಲ್ಲ ಎಂದ ಸಿಬಲ್, ನಾನು ಕಾಂಗ್ರೆಸ್ ತೊರೆದಿದ್ದೇನೆ, ಆದರೆ ಅದರ ಸಿದ್ಧಾಂತವಲ್ಲ ಎಂದು ಹೇಳಿದರು.