ಬೆಂಗಳೂರು: ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ಬೆಂಗಳೂರಿನ ಲಗ್ಗೆರೆ ಸಮೀಪದ ಲಕ್ಷ್ಮಿದೇವಿ ನಗರದಲ್ಲಿ ನಡೆದಿದೆ. ವಾಜಪೇಯಿ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗಿ ತೆರಳುತ್ತಿದ್ದಾಗ ಮುನಿರತ್ನ ಮೇಲೆ ಕಲ್ಲು ಮತ್ತು ಮೊಟ್ಟೆ ದಾಳಿ ನಡೆದಿದೆ. ಕಾರಿನ ಗಾಜಿನ ಮೇಲೆಯೇ ಕಲ್ಲು ಬಿದ್ದಿದೆ.
ಮೊಟ್ಟೆ ಹೊಡೆದ ಬಳಿಕ ಶಾಸಕ ಮುನಿರತ್ನ ಅಲ್ಲಿಂದ ತೆರಳಿದ್ದು, ನಂತರ ಮುನಿರತ್ನ ಬೆಂಬಲಿಗರು ಹಾಗೂ ಕೈ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.ಘಟನೆ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮತ್ತು ಮಾರಾಮಾರಿ ನಡೆದಿದೆ ಎನ್ನಲಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಅವರು ಕಾರ್ಯಕ್ರಮಕ್ಕೆ ಬಂದ ಕೂಡಲೇ ಅವರ ಕಾರಿನತ್ತ ಮೊಟ್ಟೆ ಎಸೆದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.