ಹುಬ್ಬಳ್ಳಿ : ಭವಾನಿ ರೇವಣ್ಣ ಅವರನ್ನು ಕೆಣಕಯತ್ತಿರೋದು ನಾನಲ್ಲಅವರು ಹಾಸನದಲ್ಲಿ ನಿಂತ್ರೂ ಗೆಲ್ಲಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಟಾಂಗ್ ಕೊಟ್ಟ ಎಚ್.ಡಿಕೆ.
ದೇವೇಗೌಡರ ಕುಟುಂಬ ಒಡೆಯಲು ಕೆಲ ಶಕುನಿಗಳು ಯತ್ನಿಸ್ತಿದಾರೆ ಅದಕ್ಕೆ ರೇವಣ್ಣ ಬಲಿಯಾಗ್ತಿದಾರೆ
ಹಾಸನದಲ್ಲಿ ಸದೃಢ ಕಾರ್ಯಕರ್ತರಿದ್ದಾರೆ, ಅವರ ನಿರ್ಧಾರ ಅಂತಿಮ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಭವಾನಿಯವರು ಸ್ಪರ್ಧೆ ಮಾಡಿದರೆ ಹಾಸನದಲ್ಲಿ ಗೆಲ್ಲಲ್ಲಾ
ಎಲ್ಲಾ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರತಿಕ್ರಿಯೆ ನಡೆಯುತ್ತಿದೆ ನಾನು ನಿರಂತರವಾಗಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದೇನೆ ಕೆಲವು ಸಣ್ಣ- ಪುಟ್ಟ ಸಮಸ್ಯೆಗಳಿಂದ ಎರಡನೇ ಪಟ್ಟಿ ಬಿಡುಗಡೆ ಮಾಡಿಲ್ಲ ಎರಡು ಕ್ಷೇತ್ರಗಳಲ್ಲಿ ರೇವಣ್ಣ ಟಿಕೇಟ್ ಕೇಳಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಶಕುನಿಗಳು ನಮ್ಮ ಕುಟುಂಬ ಮುಗಿಸಲು ಪ್ರಯತ್ನಿಸುತ್ತಿದ್ದಾರೆ.
ಮಹಾಭಾರತ ಕಾಲದಿಂದ ನಡೆದು ಬಂದಿದ್ದೆ ಈಗಲೂ ನಡೆಯುತ್ತಿದೆ ಈಗಲೂ ಅದೇ ರೀತಿಯ ಕುರುಕ್ಷೇತ್ರ ನಡೀತಿದೆ ನಾನು ಮೊದಲಿಂದಲೂ ಹಾಸನದ ಟಿಕೆಟ್ ಸಾಮಾನ್ಯ ಕಾರ್ಯಕರ್ತರಿಗೆ ನೀಡುವ ಕ್ಲೂ ನೀಡಿದ್ದೆ
ಕುಟುಂಬಕ್ಕೆ ಹಾಸನ ಟಿಕೆಟ್ ಕೊಟ್ಟು ಮಾಧ್ಯಮಗಳಿಗೆ ಆಹಾರ ಆಗಲ್ಲ ರೇವಣ್ಣ ಕುಟುಂಬಕ್ಕೆ ತಲೆ ತುಂಬಿ ದಾರಿ ತಪ್ಪಿಸುತ್ತಿದ್ದಾರೆ ಶಕುನಿಗಳು ದೇವೇಗೌಡರ ಕುಟುಂಬವನ್ನು ಮುಗಿಸಬೇಕು ಅಂತಿವೆ ಶಕುನಿಗಳ ಷಡ್ಯಂತ್ರಕ್ಕೆ ರೇವಣ್ಣ ಬಲಿಯಾಗ್ತಿದಾರೆ ಎಂದು ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.