ಬೆಂಗಳೂರು:- ಭಾರತದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೆಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನ ಸೌಧದ ಬಳಿ ಇರುವ ಅಂಬೇಡ್ಕರ್ ಪುತ್ಥಳಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ. ಪರಿಷತ್ ಸದಸ್ಯ T.A. ಶರವಣ ಅವರು ಪುಷ್ಪ ನಮನ ಸಲ್ಲಿಸಿ ಗೌರವಿಸಿದರು. ಇದೆ ವೇಳೆ ಜೆಡಿಎಸ್ ಮುಖಂಡರು ಹಾಗೂ ಇತರ ಗಣ್ಯರು ಭಾಗಿಯಾಗಿದ್ದರು.
ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ಅಂಬೇಡ್ಕರ್ ಕುರಿತಾಗಿ ಅವರ ಸಾಧನೆ ಹಾಗೂ ನಡೆದು ಬಂದ ಹಾದಿ ಬಗ್ಗೆ ಮಾತನಾಡಿದ್ರು.
ಇನ್ನೂ ಡಾ. ಬಿ.ಆರ್ ಅಂಬೇಡ್ಕರ್ ಅವರು ನಿಧನ ಹೊಂದಿದ ದಿನವನ್ನು ಪ್ರತಿವರ್ಷ ಮಹಾಪರಿನಿರ್ವಾಣ ದಿವಸವೆಂದು ಆಚರಿಸಲಾಗುತ್ತದೆ. ಭಾರತ ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರು ಒಬ್ಬ ಖ್ಯಾತ ನ್ಯಾಯವಾದಿ, ಆರ್ಥಿಕ ತಜ್ಞ, ರಾಜಕೀಯ ಮತ್ತು ಸಮಾಜ ಸುಧಾರಕರಾಗಿ ಕೂಡ ಗುರುತಿಸಿಕೊಂಡಿದ್ದರು, ದೇಶದಲ್ಲಿ ದಲಿತ ಬೌದ್ಧ ಚಳವಳಿಗಳು, ಮಹಿಳೆಯರು, ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಧೀಮಂತ ನಾಯಕ ಎಂದೇ ಹೇಳಲಾಗಿದೆ.