ಬೆಂಗಳೂರು: ಯಶವಂತಪುರದಲ್ಲಿ ಮೂರು ಎಕರೆ ಪ್ರದೇಶದಲ್ಲಿ ನೂತನ ವಕ್ಫ್ ಭವನ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ವಕ್ಫ್ ಮಂಡಳಿಯ ನವೀಕೃತ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಆದಷ್ಟು ಬೇಗ ಸರ್ಕಾರದ ನೆರವು ಪಡೆದು ಕಾಮಗಾರಿ ಪ್ರಾರಂಭಿಸಲಾಗುತ್ತದೆ. ವಕ್ಫ್ ಮಂಡಳಿಯ ಮೂರು ಎಕರೆ ಜಾಗ ಯಶವಂತಪುರದಲ್ಲಿದೆ. ಈ ಜಾಗದಲ್ಲಿ ಒಂದು ಎಕರೆಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಭವನ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದಿದ್ದಾರೆ.
ಹಜ್ ಸಚಿವ ರಹೀಮ್ ಖಾನ್, ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಅವರು, ಜಮೀರ್ ಅಹಮದ್ ಅವರ ಸಮಯದಲ್ಲಿ ನೂತನ ವಕ್ಫ್ ಭವನ ನಿರ್ಮಾಣ ಆಗಲಿ. ಇದಕ್ಕೆ ನಮ್ಮೆಲ್ಲರ ಬೆಂಬಲ ಇರುತ್ತದೆ ಎಂದಿದ್ದಾರೆ.