ಬೆಂಗಳೂರು: ಬೆಂಗಳೂರಿನ ಹೆಚ್ ಬಿಆರ್ ಲೇಔಟ್ ನಲ್ಲಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮತ್ತು ಮಗು ಸಾವನ್ನಪ್ಪಿರುವ ಪ್ರಕರಣದಿಂದ ಎಚ್ಚೆತ್ತಿರುವ ಬಿಂಆರ್ಸಿಎಲ್ ಮುಂಬರುವ ಮೂರು ನಮ್ಮ ಮೆಟ್ರೋ ಮಾರ್ಗಗಳ ನಿರ್ಮಾಣದ ಸುರಕ್ಷತೆಗಾಗಿ ಐಐಎಸ್ಸಿ ತಂಡದ ನಿಯೋಜಿಸಲಾಗಿದೆ.
ಮುಂಬರುವ ಮೂರು ಮಾರ್ಗಗಳ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ನಮ್ಮ ಮೆಟ್ರೋ ಸಂಸ್ಥೆ ಭಾರತೀಯ ವಿಜ್ಞಾನ ಸಂಸ್ಥೆಯ ತಂಡವೊಂದನ್ನು ನಿಯೋಜನೆ ಮಾಡಿದೆ.
ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಜೆ.ಎಂ.ಚಂದ್ರ ಕಿಶನ್, ಸುಸ್ಥಿರ ತಂತ್ರಜ್ಞಾನಗಳ ಕೇಂದ್ರದ ಸಹ ಪ್ರಾಧ್ಯಾಪಕ ಲಕ್ಷ್ಮೀನಾರಾಯಣ ರಾವ್ ಹಾಗೂ ಮೂಲಸೌಕರ್ಯ, ಸುಸ್ಥಿರ ಸಾರಿಗೆ ಮತ್ತು ನಗರ ಯೋಜನೆ ಕೇಂದ್ರದಲ್ಲಿ ಈ ಹಿಂದೆ ಕೆಲಸ ಮಾಡಿದ ರಮೇಶ್ ಬಾಬು ನಾರಾಯಣಪ್ಪ ಪರಿಶೀಲನೆ ನಡೆಸಲಿದ್ದಾರೆ. ಕಳೆದ ಬುಧವಾರದಿಂದಲೇ ಕೆಲಸ ಆರಂಭಿಸಿರುವ ತಂಡ 75 ದಿನಗಳಲ್ಲಿ ವರದಿ ನೀಡುವ ಸಾಧ್ಯತೆಯಿದೆಸಾಧ್ಯತೆಯಿದೆ