ಆನೇಕಲ್:- ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಬೆಳೆ ಹಾನಿಯ ಜೊತೆಗೆ ಪ್ರಾಣ ಭಯದಲ್ಲಿ ಗ್ರಾಮಸ್ಥರು ಇದ್ದಾರೆ.
ತಮಿಳುನಾಡಿನ ಪೊದ್ದೂರು, ರಾಮಾಪುರಂ, ನಾಯಕನಪಲ್ಲಿ ಭಾಗದಲ್ಲಿ ಕಾಡಾನೆಗಳ ಉಪಟಳ ಜೋರಾಗಿದೆ. ,ರಾಜ್ಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಗಡಿ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆಗಳು ಬೀಡುಬಿಟ್ಟಿದೆ.
ಕಾಡಾನೆಗಳನ್ನ ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ. ಪಟಾಕಿ ಸಿಡಿಸಿ ಕಾಡಾನೆಗಳನ್ನ ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗಟ್ಟಿದೆ. ಕಾಡಾನೆಗಳು ಹೆದ್ದಾರಿ ದಾಟಿ ಹೋಗುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.