ಬೀದರ್ : ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮತಯಾಚನಾ ಯಾತ್ರೆ (ಚುನಾವಣಾ ಪ್ರಚಾರ) ಮುಂದುವರೆಸಿದ್ದಾರೆ. ಪ್ರತಿ ನಿತ್ಯ ಹತ್ತಾರು ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸುತ್ತಿರುವ ಅವರನ್ನು ಮತದಾರರು, ಅಭಿಮಾನಿಗಳು, ಕಾರ್ಯಕರ್ತರು ಹೋದಲ್ಲೆಲ್ಲಾ ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಾರೆ.
ಬೀದರ್ ದಕ್ಷಿಣ ಕ್ಷೇತ್ರದ ನಿಜಾಂಪುರ, ಹಜ್ಜರಗಿ, ಕಮಲಾಪೂರ, ಕೋಳಾರ ಕೆ ಸೇರಿದಂತೆ ವಿವಿಧೆಡೆ ಭಾನುವಾರ ಮತಯಾಚನಾ ಯಾತ್ರೆ (ಚುನಾವಣಾ ಪ್ರಚಾರ) ನಡೆಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಗ್ರಾಮಗಳ ಮತದಾರರು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಬಾಜಾ ಭಜಂತ್ರಿಯೊಂದಿಗೆ ಭರ್ಜರಿಯಾಗಿ ಸ್ವಾಗತಿಸಿಕೊಂಡರು.
ಗ್ರಾಮ ಸಂಚಾರ ನಡೆಸಿ ಮನೆಮನೆಗೆ ತೆರಳಿ ಮತಯಾಚಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ನಾಡಿನ ಒಳಿತಿಗಾಗಿ, ಕ್ಷೇತ್ರದ ಇನ್ನಷ್ಟು ಅಭಿವೃದ್ಧಿಗಾಗಿ ಜೆಡಿಎಸ್ ಪಕ್ಷಕ್ಕೆ ಮತನೀಡುವಂತೆ ಮನವಿ ಮಾಡಿದರು. ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಮಾಡಿದ್ದ ಜನಪರ ಕೆಲಸಗಳ ಬಗ್ಗೆ ಮತದಾರರಿಗೆ ತಿಳಿಸಿದ ಅವರು, ಪಕ್ಷದ ಪ್ರಣಾಳಿಕೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಿದರು.
ಪ್ರಚಾರದ ನಡುವೆಯೇ ಗ್ರಾಮಗಳ ಮಂದಿರ, ಮಸೀದಿ, ಚರ್ಚ್, ದರ್ಗಾಗಳಿಗೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಗ್ರಾಮಗಳಲ್ಲಿನ ಮಹಾತ್ಮರ ಪುತ್ಥಳಿ, ಪ್ರತಿಮೆ, ಪೋಟೋಗಳಿಗೆ ಮಾಲಾರ್ಪಣೆ ಮಾಡಿದರು. ಇದೇ ವೇಳೆ ಕೋಳಾರ ಕೆ ಗ್ರಾಮದಲ್ಲಿ ನೂತನವಾಗಿ ಆರಂಭಿಸಲಾದ ಜೆಡಿಎಸ್ ಪಕ್ಷದ ಕಛೇರಿಯನ್ನು ಉದ್ಘಾಟಿಸಿದರು.