ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವರ್ಷಧಾರೆ ಚುರುಕುಗೊಂಡಿದೆ. ಪಶ್ಚಿಮಘಟ್ಟ ವ್ಯಾಪ್ತಿ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ನದಿಗಳ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದೆ. ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ ಭದ್ರಾ ಡ್ಯಾಂಗಳ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ಇಂದು ಒಂದು ದಿನದ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯನ್ನು ಆರೆಂಜ್ ಅಲರ್ಟ್ ಆಗಿ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ.ಶಿವಮೊಗ್ಗ ಜಿಲ್ಲೆಯನ್ನು ಆರಂಜ್ ಅಲರ್ಟ್ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಜಿಲ್ಲೆಯಲ್ಲಿ ಗಾಳಿ ಮಳೆಗೆ ರಸ್ತೆ ಬದಿಯ ಮರಗಳು ವಿದ್ಯುತ್ ಕಂಬಗಳು ಕುಸಿದಿದ್ದು ವಿದ್ಯುತ್ ವ್ಯತ್ಯಯ ಗೊಂಡಿದೆ.ಶಿವಮೊಗ್ಗ ನಗರದಲ್ಲಿ ಸುರಿಯುತ್ತಿದ್ದ ಮಳೆ ಕೊಂಚ ಬಿಡುವು ನೀಡಿದೆ.
ಆದರೆ ತೀರ್ಥಹಳ್ಳಿ ಆಗುಂಬೆ ಮಾಸ್ತಿಕಟ್ಟೆ ಹುಲಿಕಲ್ ಯಡೂರ್ ಮಾಣಿ ಪಾತ್ರದಲ್ಲಿ 170 ಮಿಲಿಮೀಟರ್ ಗೂ ಅಧಿಕ ಮಳೆಯಾಗುತ್ತಿದ್ದು. ಇನ್ನು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸೂಚನೆಯನ್ನು ಹನಾಮನ ಇಲಾಖೆ ನೀಡಿದೆ. .ಲಿಂಗನಮಕ್ಕಿ ಜಲಾಶಯಕ್ಕೆ,ಈ ವರ್ಷ ದಾಖಲೆ ಪ್ರಮಾಣದಲ್ಲಿ 73505 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬಂದಿದಿದ್ದು ಜಲಾಶಯದ ಮಟ್ಟ ಒಂದೇ ದಿನದಲ್ಲಿ ನಾಲ್ಕು ಅಡಿ ಏರಿಕೆ ಕಂಡಿದೆ.. ಗರಿಷ್ಠ 1819 ಅಡಿ ನೀರಿನ ಸಂಗ್ರಹ ಮಟ್ಟ ಹೊಂದಿರುವ ಲಿಂಗನಮಕ್ಕಿ ಡ್ಯಾಂ ನ ,ನೀರಿನ ಮಟ್ಟ 1775.15 ಅಡಿ ತಲುಪಿದೆ.
ಭದ್ರಾ ಡ್ಯಾಂ ನ ಹಿನ್ನೀರಿನ ಪ್ರದೇಶದಲ್ಲಿ ಕೂಡ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ 39 348 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಗರಿಷ್ಠ 186 ಅಡಿ ನೀರಿನ ಮಟ್ಟ ಹೊಂದಿರುವ ಭದ್ರಾ ಜಲಾಶಯದಲ್ಲಿ ಪ್ರಸ್ಥುತ 149.5 ಅಡಿ ನೀರು ಸಂಗ್ರಹಗೊಂಡಿದೆ. ಗಾಜನೂರು ಡ್ಯಾಂ ನಿಂದ 64 ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡಲಾಗಿದ್ದು ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.ಶಿವಮೊಗ್ಗ ನಗರದ ಹೃದಯಭಾಗದಲ್ಲಿ ಹರಿಯುವ ತುಂಗಾ ನದಿ ಪ್ರವಾಹ ರೂಪದಲ್ಲಿ ಹರಿಯುತ್ತಿದೆ.ನದಿ ಪಾತ್ರಕ್ಕೆ ಜನರು ಹೋಗದಂತೆ ಭದ್ರತೆ ನೀಡಲಾಗಿದೆ. ಜಿಲ್ಲೆಯಾದ್ಯಂತ ಇನ್ನು ಮೂರು ದಿನಗಳ ಕಾಲ ಧಾರಾಕಾರವಾಗಿ ಮಳೆಯಾಗಲಿದೆ. ಹೀಗಾಗಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಕಾಲೇಜುಗಳಿಗೆ ರಜೆ ನೀಡುವುದು ಆಯಾ ಕಾಲೇಜು ಪ್ರಾಂಶುಪಾಲರ ನಿರ್ಧಾರಕ್ಕೆ ಬಿಡಲಾಗಿದೆ. ಒಟ್ಟಿನಲ್ಲಿ ಶಿವಮೊಗ್ಗದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.