ಇಂಪಾಲ: ಸಂಘರ್ಷ ಪೀಡಿತ ಪ್ರದೇಶವಾದ ಮಣಿಪುರದಲ್ಲಿ (Manipur) ರಾತ್ರಿ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪೊಲೀಸ್ (Police) ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಮುಂಜಾನೆಯವರೆಗೂ ಗುಂಡಿನ ದಾಳಿ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಮತ್ತು ಚುರಾಚಂದ್ಪುರ್ ಜಿಲ್ಲೆಯ ಕಾಂಗ್ವಾಯ್ನಲ್ಲಿ ಗುಂಡಿನ ದಾಳಿ ನಡೆಸಿದ್ದು,
ಗುಂಪು ಗುಂಪಾಗಿ ಸೇರಿಕೊಂಡು ಅಲ್ಲಲ್ಲಿ ಬೆಂಕಿ ಹಚ್ಚುವ ವಿದ್ವಂಸಕ ಕೃತ್ಯಗಳು ನಡೆದಿವೆ. ಭಾರತೀಯ ಸಶಸ್ತ್ರ ಪಡೆ, ಅಸ್ಸಾಂ ರೈಫಲ್ಸ್, ರ್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF) ಮತ್ತು ರಾಜ್ಯ ಪೊಲೀಸರ ಜಂಟಿ ಪಡೆಗಳು ಇಂಪಾಲದ ಪೂರ್ವ ಜಿಲ್ಲೆಯಲ್ಲಿ ಮಧ್ಯರಾತ್ರಿಯವರೆಗೆ ಧ್ವಜ ಮೆರವಣಿಗೆ (Flag March) ಕೈಗೊಂಡಿದ್ದ ಸಂದರ್ಭ ಅಡ್ವಾನ್ಸ್ ಆಸ್ಪತ್ರೆ ಬಳಿಯ ಅರಮನೆ ಕಾಂಪೌಂಡ್ನಲ್ಲಿ ಬೆಂಕಿ ಹಚ್ಚುವ ಪ್ರಯತ್ನ ನಡೆದಿದೆ.