ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ನಿರಂತರವಾಗಿ ಗಾಳಿ, ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.
ಹಗುರ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ.
ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಮಳೆ ಚೆನ್ನಾಗಿ ಆಗುತ್ತಿದೆ. ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದ್ದು, ಪ್ರವಾಹದ ಭೀತಿ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆ ಮತ್ತು ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ದಾಖಲಾಗಿದೆ. ಕೊಡಗಿನ ಸೋಮವಾರಪೇಟೆಯಲ್ಲಿ 15 ಸೆಂ.ಮೀ., ಉತ್ತರ ಕನ್ನಡದ ಕ್ಯಾಸಲ್ ರಾಕ್ ಮತ್ತು ಚಿಕ್ಕಮಗಳೂರಿನ ಶೃಂಗೇರಿಯಲ್ಲಿ 14 ಸೆಂ.ಮೀ. ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಮುದ್ರ ಮಟ್ಟದಲ್ಲಿರುವ ಆಫ್ – ಶೋರ್ ಟ್ರಫ್ ಈಗ ದಕ್ಷಿಣ ಗುಜರಾತ್ ನಿಂದ ಉತ್ತರ ಕರ್ನಾಟಕ ಕರಾವಳಿಯವರೆಗೆ ಹಾದು ಹೋಗುತ್ತಿದೆ. ಆದ್ದರಿಂದ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುತ್ತಿದೆ