ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 10,112 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,329 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ದೇಶದಲ್ಲಿ 67,806 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,92,854 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 01,947 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,39,528 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 01,43,899 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.