ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 12,193 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.ದೇಶದಲ್ಲಿ ಒಂದೇ ದಿನದಲ್ಲಿ 42 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಈವರೆಗೆ 5,31,300 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ದೇಶದಲ್ಲಿ 67,556 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,83,021 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 05,602 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,37,581 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 01,97,477 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.