ನವದೆಹಲಿ: ದೇಶದಾದ್ಯಂತ ಕೆಲ ದಿನಗಳಿಂದ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 526 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,30,802 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ದೇಶದಲ್ಲಿ 5,915 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,58,703 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.ನಿನ್ನೆ 07,160 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,04,798 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 88,511 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.