ದೇಶದಲ್ಲಿ ಒಂದೇ ದಿನ 347 ಜನರಲ್ಲಿ ಕೊರೋನಾ..! ಮಹಾಮಾರಿಗೆ 3 ಮಂದಿ ಬಲಿ

ರಾಷ್ಟ್ರೀಯ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 347 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ಕೊರೊನಾ ಮಹಾಮಾರಿಗೆ 3 ಜನರು ಬಲಿಯಾಗಿದ್ದಾರೆ ಈ ಮೂಲಕ ದೇಶದಲ್ಲಿ ಈವರೆಗೆ 5,30,604 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 5,516 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.79ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,34,710 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 78,454 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,89,56,902 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,67,170 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.