ಸ್ಪೇನ್ ಅಧ್ಯಕ್ಷ ಪೆಡ್ರೋ ಸ್ಯಾಂಚೆಜ್(Pedro Sanchez)ಗೆ ಕೊರೊನಾ ಸೋಂಕು ತಗುಲಿದ್ದು, ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ದೆಹಲಿಯಲ್ಲಿ ಇಂದಿನಿಂದ ಅಂದ್ರೆ ಸೆಪ್ಟೆಂಬರ್ 9 ಹಾಗೂ 10ರಂದು ಜಿ20 ಶೃಂಗಸಭೆ ನಡೆಯಲಿದೆ. ಪೆಡ್ರೋ ಅವರ ಆರೋಗ್ಯ ಉತ್ತಮವಾಗಿದೆ. ವೈಸ್ ಪ್ರೆಸಿಡೆಂಟ್ ನಾಡಿಯಾ ಹಾಗೂ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರಸ್ ಶೃಂಗಸಭೆಯಲ್ಲಿ ಸ್ಪೇನ್ ಅನ್ನು ಪ್ರತಿನಿಧಿಸಲಿದ್ದಾರೆ.
ಶೃಂಗಸಭೆಯಿಂದ ದೂರ ಉಳಿದಿರುವ ಮೂರನೇ ವಿಶ್ವ ನಾಯಕ ಇವರಾಗಿದ್ದಾರೆ, ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ , ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಭೇಟಿ ನೀಡುತ್ತಿಲ್ಲ. ಎಲ್ಲಾ G20 ದೇಶಗಳು ಮತ್ತು 9 ಇತರ ರಾಜ್ಯಗಳ ನಾಯಕರು (ಬಾಂಗ್ಲಾದೇಶ, ಈಜಿಪ್ಟ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಓಮನ್, ಸಿಂಗಾಪುರ್, ಸ್ಪೇನ್ ಮತ್ತು ಯುಎಇ) ಭಾಗವಹಿಸಲಿದ್ದಾರೆ.