ದೇಶದಲ್ಲಿ ಒಂದೇ ದಿನ 2503 ಜನರಲ್ಲಿ ಕೊರೋನಾ..! ಸೋಂಕಿಗೆ 27 ಮಂದಿ ಬಲಿ

ರಾಷ್ಟ್ರೀಯ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಗಣನೀಯವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 2503 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 27 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,15,877ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 36,168 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 4,377 ಜನರು ಕೋವಿಡ್ ನಿಂದ ಗುಣಮುಖ ರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,41,449 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 4,61,318 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,80,19,45,779 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 5,32,232 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Leave a Reply

Your email address will not be published. Required fields are marked *