ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿ ಅವಧಿಯನ್ನು ಮಾರ್ಚ್ 6ರವರೆಗೆ ವಿಸ್ತರಿಸಿ ರೋಸ್ ಅವಿನ್ಯೂ ಕೋರ್ಟ್ ಆದೇಶ ನೀಡಿದೆ.ಐದು ದಿನಗಳ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ಎಂಕೆ ನಾಗ್ ಪಾಲ್ ಅವರ ಮುಂದೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಹಾಜರುಪಡಿಸಿತು.
ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೇಂದ್ರೀಯ ತನಿಖಾ ಸಂಸ್ಥೆ ನ್ಯಾಯಾಧೀಶರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಇನ್ನೆರೆಡು ದಿನ ಸಿಬಿಐ ಕಸ್ಟಡಿಗೆ ಒಪ್ಪಿಸಿತು.
![Demo](https://prajatvkannada.com/wp-content/uploads/2023/08/new-Aston-Band.jpeg)