ಟೆಲ್ಅವೀವ್ : ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಮೊದಲ ಬಾರಿಗೆ ನ್ಯಾಯಾಲಯದ ಕಟಕಟೆಯಲ್ಲಿ ನಿಂತು ವಿಚಾರಣೆ ಎದುರಿಸಿದ್ದಾರೆ.
ನ್ಯಾಯಾಧೀಶರಲ್ಲೊಬ್ಬರು ನೆತನ್ಯಾಹು ಅವರಿಗೆ ಕಟೆಕಟೆಯೊಳಗೆ ಕುಳಿತುಕೊಳ್ಳುವ ಇಲ್ಲವೇ ನಿಲ್ಲಲು ಅವಕಾಶವಿರುವುದಾಗಿ ತಿಳಿಸಿದರು. ವಂಚನೆ, ವಿಶ್ವಾಸದ್ರೋಹ ಹಾಗೂ ಲಂಚ ಸ್ವೀಕಾರ ಕುರಿತ ಮೂರು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನೆತನ್ಯಾಹು ಅವರು ನ್ಯಾಯಾಲಯದಿಂದ ವಿಚಾರಣೆಗೆ ಎದುರಿಸಿದರು.
ತನ್ನ ಹಾಗೂ ಕುಟುಂಬವನ್ನು ಓಲೈಸುವಂತಹ ವರದಿಗಳನ್ನು ಪ್ರಕಟಿಸುವುದಕ್ಕೆ ಪ್ರತಿಫಲವಾಗಿ ಮಾಧ್ಯಮ ಮಾಲಕರಿಗೆ ಅನುಕೂಲಕರವಾಗುವಂತಹ ಕಾನೂನು, ನಿಯಮಗಳ್ನು ಜಾರಿಗೊಳಿಸಿದ ಆರೋಪವನ್ನು ಕೂಡಾ ಅವರು ಎದುರಿಸುತ್ತಿದ್ದಾರೆ.