ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಕ್ಷಣಗಣನೆ ಶುರುವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ.
ಒಟ್ಟು 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದೆ.
16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದ್ದು ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ(Congress Guarantees) ಅನುಷ್ಠಾನ ವಿಚಾರ, ಬಿಜೆಪಿ ಅವಧಿಯ ವಿವಾದಿತ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಸದನದಲ್ಲಿ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಿದ್ಧತೆ ಮಾಡಿಕೊಂಡಿದ್ದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಆಡಳಿತ ಪಕ್ಷ ಕಾಂಗ್ರೆಸ್ ಸಜ್ಜಾಗಿದೆ.