ಬೆಂಗಳೂರು: ನ್ಯೂ ಇಯರ್ ಸೆಲೆಬ್ರೇಷನ್ಗೆ ಕ್ಷಣಗಣನೆ ಶುರುವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗಾಗಲೇ ನ್ಯೂಇಯರ್ ಜೋಶ್ ಹೆಚ್ಚಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಕಣ್ಗಾವಲು ಹಾಕಲಾಗಿದೆ.
ಇದರ ಬೆನ್ನಲ್ಲೇ ಒರಿಸ್ಸಾದಿಂದ ಗಾಂಜಾ ತಂದು ಮಾರಾಟ ಮಾಡ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಗೋವಿಂದ ರಾಜ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಲಕ್ಷ್ಮೀ ನಾರಾಯಣ ಮತ್ತು ಸ್ವಾದೀನ್ ಬೆಹರು ಬಂಧಿತ ಆರೋಪಿಗಳಾಗಿದ್ದು, ನ್ಯೂಇಯರ್ ಗೆ ಕಿಕ್ಕೇರಿಸಲು ಆರೋಪಿಗಳು ಒರಿಸ್ಸಾದಿಂದ ಗಾಂಜಾ ತಂದು ಪಾರ್ಕ್ ಒಂದರಲ್ಲಿ ಮಾರಾಟ ಮಾಡಲು ಮುಂದಾಗಿದ್ದರು.
ಇನ್ನೂ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರ ಕೈಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಸದ್ಯ ಆರೋಪಿಗಳಿಂದ ಐದು ಕೆಜಿ ಗಾಂಜಾ ವಶಕ್ಕೆ ಪಡೆದು, ಘಟನೆ ಸಂಬಂಧ ಗೋವಿಂದ ರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
