ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರುವ ಶಿವಣ್ಣ ಇದೀಗ ರಾಮ್ ಚರಣ್ ಜೊತೆ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ. ರಾಮ್ ಚರಣ್ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಚಿತ್ರ ಇದೇ ಮಾರ್ಚ್ 20ರಂದು ಸೆಟ್ಟೇರಲಿದೆ.
ರಾಮ್ ಚರಣ್ ಹಾಗೂ ಶಿವಣ್ಣ ಕಾಂಬಿನೇಷನ್ ನ ಸಿನಿಮಾಗೆ ಪೆದ್ದಿ ಎಂದು ಹೆಸರಿಡಲಾಗಿದೆಯಂತೆ. ಪೆದ್ದಿ ಎಂದರೆ ತೆಲುಗಿನಲ್ಲಿ ದೊಡ್ಡದು ಎಂದರ್ಥ. ಈ ಸಿನಿಮಾದ ಕುರಿತಂತೆ ಹಲವಾರು ವಿಚಾರಗಳು ಈಗಾಗಲೇ ತೆಲುಗು ಸಿನಿಮಾ ರಂಗದಲ್ಲಿ ಗಿರಕಿ ಹೊಡೆಯುತ್ತಿವೆ. ಈ ಸಿನಿಮಾದಲ್ಲಿ ಶಿವಣ್ಣ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಸ್ವತಃ ಶಿವರಾಜ್ ಕುಮಾರ್ ಮಾತನಾಡಿದ್ದಾರೆ. ‘ತೆಲುಗಿನಲ್ಲಿ ಆಫರ್ ಬಂದಿದ್ದು ನಿಜ. ರಾಮ್ ಚರಣ್ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ಬುಚ್ಚಿ ಬಾಬು ನನ್ನನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಆ ಸಿನಿಮಾ ಬಗ್ಗೆ ಸದ್ಯ ಏನೂ ಹೇಳಲಾರೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಈ ಚಿತ್ರದಲ್ಲಿ ರಾಮ್ ಚರಣ್ ಗೆ ಜೋಡಿಯಾಗಿ ನಟಿ ಜಾನ್ವಿ ಕಪೂರ್ ಕಾಣಿಸಿಕೊಳ್ತಿದ್ದಾರೆ. ಈ ಮೊದಲು ನಟಿ ಶ್ರೀಲೀಲಾಗೆ ಮಣೆ ಹಾಕಲಾಗಿತ್ತು. ಆದರೆ ಇದೀಗ ರಾಮ್ ಚರಣ್ ಜೊತೆ ಜಾನ್ವಿ ನಟಿಸೋದು ಪಕ್ಕ ಆಗಿದೆ.