ದಿಸ್ಪುರ್: ಮುಂದಿನ ಮೂರು ವರ್ಷಗಳಲ್ಲಿ ಭಾರತ ನಕ್ಸಲಿಸಂ ಮುಕ್ತ ರಾಷ್ಟ್ರವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ಕೊಟ್ಟಿದ್ದಾರೆ. ಅಸ್ಸಾಂನ ಸಲೋನಿಬರಿಯಲ್ಲಿ ಸಶಸ್ತ್ರ ಸೀಮಾ ಬಲದ 60ನೇ ಪುನರುತ್ಥಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ಮುಂದಿನ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ನಕ್ಸಲ್ ಸಮಸ್ಯೆಯಿಂದ 100% ಮುಕ್ತವಾಗಲಿದೆ ಎಂದಿದ್ದಾರೆ.
ಎಲ್ಲಾ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಸಂಸ್ಕೃತಿ, ಇತಿಹಾಸ, ಭೂಗೋಳ ಮತ್ತು ಭಾಷೆಯನ್ನು ಸೂಕ್ಷ್ಮವಾಗಿ ಸಂಯೋಜಿಸುವಲ್ಲಿ ವಿಶಿಷ್ಟ ಪಾತ್ರ ವಹಿಸುತ್ತದೆ. ಅಲ್ಲದೇ ಗಡಿ ಪ್ರದೇಶಗಳಲ್ಲಿ ಜನರನ್ನು ದೇಶದ ಇತರ ಭಾಗಗಳಿಗೆ ಹತ್ತಿರವಾಗುವಂತೆ ಮಾಡುತ್ತದೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಸಶಸ್ತ್ರ ಸೀಮಾ ಬಲದ 60ನೇ ಪುನರುತ್ಥಾನ ದಿನಾಚರಣೆಯ ಅಂಗವಾಗಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.