ಬೆಂಗಳೂರು:- ಹಸುಗಳ ಕೆಚ್ಚಲು ಕೊಯ್ದು ಬೆಂಗಳೂರಿನಲ್ಲಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದರು. ಇದೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಇದೆಲ್ಲಾ ಸರ್ಕಾರದ ವೈಫಲ್ಯ ಎಂದು ಆರೋಪಿಸಿ ಜಿ. ಪರಮೇಶ್ವರ್ ಮನೆಮುಂದೆ ಪ್ರತಿಭಟನೆಗೆ ಕರೆ ಕೊಟ್ಟಿದೆ
ತುಮಕೂರಿನ ಹೆಗ್ಗೆರೆ ಬಳಿಯ ಸಿದ್ದಾರ್ಥ ನಗರದಲ್ಲಿರುವ ಪರಮೇಶ್ವರ್ ಮನೆಮುಂದೆ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಸಲು ಜಿಲ್ಲಾ ಬಿಜೆಪಿ ಘಟಕ ಕರೆ ನೀಡಿದೆ. ಪ್ರತಿಭಟನೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಒಬ್ಬರು ಎಎಸ್ಪಿ, ಇಬ್ಬರು ಡಿವೈಎಸ್ಪಿ, ನೇತೃತ್ವದಲ್ಲಿ ಭದ್ರತೆ ನೀಡಿದ್ದು, ಸುಮಾರು ನೂರೈವತ್ತಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.