ರಾಮನಗರ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವ ಮಹಾದೇವಯ್ಯ ಕೊಲೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಆದೇಶ ಹೊರಡಿಸಿದ್ದಾರೆ.
ಮಹಾದೇವಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳಾದ ಮುರುಗೇಶ್ (42), ಪ್ರಭಾಕರ್ (27), ಮಧನ್ ಕುಮಾರ್ (33), ರಾಧ (40) ಚನ್ನಪಟ್ಟಣ ಗ್ರಾಮಾಂತರ ಠಾಣೆಯ ಪಿಎಸ್ಐ ಕೃಷ್ಣ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಅನೈತಿಕ ಸಂಬಂಧದಿಂದ ಹತ್ಯೆ ಮಾಡಿರುವುದಾಗಿ ಆರೋಪಿಗಳು ತಪ್ಪು ಒಪ್ಪಿಕೊಂಡಿದ್ದಾರೆ.
ಚನ್ನಪಟ್ಟಣದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ ಬಳಿಕ ಸಿಐಡಿ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಜೊತೆಗೆ ಕಡತ ಕೂಡ ಸಿಐಡಿ ಅಧಿಕಾರಗಳ ಕೈಸೇರಲಿದೆ. ಇದಕ್ಕಾಗಿ ಸಿಐಡಿಯ ಡಿವೈಎಸ್ಪಿ ಮಲ್ಲಿಕಾರ್ಜುನ್ ನೇತೃತ್ವದ ಟೀಮ್ ನ್ಯಾಯಾಲಯಕ್ಕೆ ಆಗಮಿಸಿದೆ. ಪ್ರಕರಣದಲ್ಲಿ ತಮಿಳುನಾಡಿನ ಧರ್ಮಾಪುರಿ ಜಿಲ್ಲೆ ಮೂಲದ ಮುರುಗೇಶ್ A1, ಪ್ರಭಾಕರ್ A2, ಮಧನ್ ಕುಮಾರ್ A3, ರಾಧ A4 ಆರೋಪಿಗಳಾಗಿದ್ದಾರೆ. ಹೆಚ್ಚಿನ ತನಿಖೆಗಾಗಿ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಸಿಐಡಿಗೆ ಪ್ರಕರಣವನ್ನು ಹಸ್ತಾಂತರಿಸಿದ್ದಾರೆ.