ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಅಕ್ರಮ ಪಟಾಕಿ ಸಂಗ್ರಹ ಅಡ್ಡೆ ಮೇಲೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಪಟಾಕಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ ಬಿ ಪಾಟೀಲ್ ನೇತೃತ್ವದಲ್ಲಿ ರಾಮಚಂದ್ರಸಾ ಸಿದ್ಲಿಂಗ್ ಎಂಬುವರ ಮನೆ ಮೇಲೆ ದಾಳಿ ಮಾಡಿದ್ದು,
ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿ ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ ದಾಳಿ ಮಾಡಿ ವಶಪಡಿಸಿಕೊಂಡ ಪೊಲೀಸರು, ಈ ಮನೆಯಲ್ಲಿ ಕಳೆದ ಹತ್ತು ಹದಿನೈದು ವರ್ಷಗಳಿಂದ ಸಂಗ್ರಹದ ಆರೋಪ ಮಾಡಿದ್ದಾರೆ. ಪ್ರತಿವರ್ಷ ಗಣೇಶೋತ್ಸವ ಹಾಗೂ ದೀಪಾವಳಿ ಸಂದರ್ಭದಲ್ಲಿ ಆಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದಾರೆ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.