PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಸ್ಕಾಟ್ಲ್ಯಾಂಡ್ ಪ್ರಧಾನ ಮಂತ್ರಿಯಾಗಿ ಪಾಕ್ ಮೂಲದ ಹಂಝಾ ಯೂಸುಫ್‌ ನೇಮಕ

March 29, 2023

ಕ್ಷಮೆ ಕೇಳದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

March 29, 2023

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023
Facebook Twitter Instagram
Thursday, March 30
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Dk Shivkumar….ಬಿಜೆಪಿಯಲ್ಲಿ ಯಡಿಯೂರಪ್ಪನವರಿಗಿಂತ ಸಿ.ಟಿ ರವಿಯೇ ಬಹಳ ದೊಡ್ಡವರಾಗಿದ್ದಾರೆ: ಡಿ.ಕೆ. ಶಿವಕುಮಾರ್
ಬೆಂಗಳೂರು Prajatv KannadaBy Prajatv KannadaMarch 14, 2023

Dk Shivkumar….ಬಿಜೆಪಿಯಲ್ಲಿ ಯಡಿಯೂರಪ್ಪನವರಿಗಿಂತ ಸಿ.ಟಿ ರವಿಯೇ ಬಹಳ ದೊಡ್ಡವರಾಗಿದ್ದಾರೆ: ಡಿ.ಕೆ. ಶಿವಕುಮಾರ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಬೆಂಗಳೂರು: ‘ಬಿಜೆಪಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರೇ ಹೈಕಮಾಂಡ್ ಆಗಿದ್ದು, ಅವರು ಯಡಿಯೂರಪ್ಪ ಅವರಿಗಿಂತ ಬಹಳ ದೊಡ್ಡವರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಟಿಕೆಟ್ ವಿಚಾರವಾಗಿ ಮಾತನಾಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ವಿಜಯೇಂದ್ರಗೆ ಶಿಕಾರಿಪುರ ಟಿಕೆಟ್ ನೀಡುವ ವಿಚಾರವಾಗಿ ಸಿ.ಟಿ ರವಿ ಅವರ ಹೇಳಿಕೆ ಕುರಿತು ಮಾಧ್ಯಮಗಳು ಸದಾಶಿವನಗರ ನಿವಾಸದ ಬಳಿ ಮಂಗಳವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ಇದು ಬಿಜೆಪಿಯ ಆಂತರಿಕ ವಿಚಾರ. ಬಿಜೆಪಿಯಲ್ಲಿ ಬಹಳ ಹಿಂದಿನಿಂದ ಈ ಬಗ್ಗೆ ಚರ್ಚೆಯಾಗುತ್ತಿದೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಪಿತೂರಿ ನಡೆದಿದ್ದು, ಅದರಲ್ಲಿ ಯಶಸ್ವಿಯೂ ಆಗಿದ್ದಾರೆ. ಇದರಲ್ಲಿ ಕಾಂಗ್ರೆಸ್ ಪಾತ್ರವಿಲ್ಲ.

ಜನ ಯಡಿಯೂರಪ್ಪ ಅವರ ಮುಖ ನೋಡಿ ಬಿಜೆಪಿಗೆ ಮತಹಾಕಿದ್ದರು. ಆದರೆ ಯಡಿಯೂರಪ್ಪ ಅವರ ಕಣ್ಣೀರು ರಾಜ್ಯ ರಾಜಕಾರಣದ ಚಿತ್ರಣ ಬದಲಿಸಲಿದೆ. ಸಿ.ಟಿ ರವಿ ಅವರು ಹೈಕಮಾಂಡ್ ಆಗಿದ್ದು, ಅವರು ಯಡಿಯೂರಪ್ಪ ಅವರಿಗಿಂತಲೂ ದೊಡ್ಡವರಾಗಿದ್ದಾರೆ. ಇದು ಆ ಪಕ್ಷದ ಆಂತರಿಕ ವಿಚಾರವಾಗಿದ್ದು, ಅವರು ತೀರ್ಮಾನ ಮಾಡುತ್ತಾರೆ’ ಎಂದು ತಿಳಿಸಿದರು.

ಹಾಲಿ ಸಚಿವರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ವಿಚಾರವಾಗಿ ನಾನು ಈಗ ಏನನ್ನೂ ಹೇಳುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ. ಈ ವಿಚಾರವಾಗಿ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಆದರೆ ನಾನು ಯಾವುದೇ ಸಚಿವರ ಜತೆ ಸಂಪರ್ಕ ಮಾಡಿಲ್ಲ. ಆದರೆ ಹಾಲಿ ಶಾಸಕರುಗಳು ಕಾಂಗ್ರೆಸ್ ಪಕ್ಷದ ಟಿಕೆಟ್ ಕೇಳುತ್ತಿದ್ದು, ಆ ಕ್ಷೇತ್ರಗಳಲ್ಲಿ ನಮ್ಮದೇ ಪಕ್ಷದ ನಾಯಕರು ಕಾರ್ಯಕರ್ತರು ಇದ್ದಾರೆ. ಹೀಗಾಗಿ ಈಗ ಪಕ್ಷಕ್ಕೆ ಅವರ ಅಗತ್ಯವಿಲ್ಲ. ನಾವು ಕೆಲವು ಕ್ಷೇತ್ರಗಳ ಬಗ್ಗೆ ಮಾತ್ರ ಈ ವಿಚಾರವಾಗಿ ಚಿಂತನೆ ಮಾಡುತ್ತಿದ್ದು, ನಾವು ಈಗಲೇ ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ’ ಎಂದರು.

ಜಾರಕಿಹೊಳಿ ಅವರ ಸಿ.ಡಿ ಬೆದರಿಕೆ ಆರೋಪದ ಬಗ್ಗೆ ಕೇಳಿದಾಗ, ‘ಈ ವಿಚಾರವಾಗಿ ಅವರೇ ಜನಸಾಮಾನ್ಯರಿಗೆ ಸ್ಪಷ್ಟನೆ ನೀಡಬೇಕು. ಬಿಜೆಪಿ ಇಂತಹ ನಾಯಕನ್ನು ಇಟ್ಟುಕೊಂಡು ಬಳಸಿಕೊಳ್ಳಲಿ. ನಾನು ಅವರ ಬಗ್ಗೆ ಮಾತನಾಡುವುದಿಲ್ಲ’ ಎಂದರು.

ಕೆ.ಎಸ್ ಈಶ್ವರಪ್ಪ ಅವರು ಆಜಾನ್ ವಿಚಾರವಾಗಿ ನೀಡಿರುವ ಹೇಳಿಕೆ ಹಾಗೂ ಇಂದು ಬಿಜೆಪಿ ಎಲ್ಲ ಮುಸಲ್ಮಾನರ ವಿರುದ್ದವಾಗಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ‘ಅವರು ತಮ್ಮ ರಾಜಕೀಯ ಅಸ್ತ್ರ ಬಳಸುತ್ತಿದ್ದಾರೆ. ಭ್ರಷ್ಟಾಚಾರದ ಆರೋಪದ ಮೇಲೆ ಅವರನ್ನು ಸರ್ಕಾರದಿಂದ ಹೊರದಬ್ಬಲಾಗಿದೆ. ಅವರು ಭ್ರಷ್ಟಾಚಾರದ ನಾಯಕರಾಗಿದ್ದು, ಅವರು ಶಿವಮೊಗ್ಗ ಹಾಗೂ ಮಲೆನಾಡಿಗೆ ತಂದಿರುವ ಕಪ್ಪುಚುಕ್ಕೆಯಿಂದ ಆ ಭಾಗ ಚೇತರಿಸಿಕೊಳ್ಳು 20-30 ವರ್ಷಗಳೇ ಬೇಕಾಗುತ್ತದೆ. ಮಾಜಿ ಸಂಸದ ಆಯನೂರು ಮಂಜುನಾಥ್ ಅವರು ಅಲ್ಲಿನ ಜನರಿಗೆ ಭ್ರಷ್ಟ ಮುಕ್ತ ಆಡಳಿತ, ವ್ಯಾಪಾರ ಸ್ನೇಹಿ ವಾತಾವರಣ ಕಲ್ಪಿಸುವ ಭರವಸೆ ನೀಡಿದ್ದಾರೆ. ಆಮೂಲಕ ಶಿವಮೊಗ್ಗದ ಪರಿಸ್ಥಿತಿ ಸರಿಯಾಗಿಲ್ಲ, ಹೀಗಾಗಿ ಯಾವುದೇ ಉದ್ಯಮಿಗಳು ಅಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆಬರುತ್ತಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಮಲೆನಾಡು ಭಾಗದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದ್ದು, ಮೋದಿ ಅವರು, ಈಶ್ವರಪ್ಪನವರು ಏನೇ ಭಾಷಣ ಮಾಡಿದರೂ ಪ್ರಯೋಜನವಿಲ್ಲ’ ಎಂದು ತಿಳಿಸಿದರು.

ಸೋಮಣ್ಣ ಅವರ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಸೋಮಣ್ಣ ಅವರು ನಮ್ಮ ತಾಲೂಕಿನವರು. ಧರ್ಮ ಹಾಗೂ ತಾಲೂಕಿನ ಕೆಲಸಗಳಲ್ಲಿ ನಾವು ಒಟ್ಟಾಗಿ ಕೆಲಸ ಮಾಡಿಕೊಂಡು ಬಂದಿದ್ದೇವೆ. ಅವರು ನಮ್ಮ ಊರಿಗೆ ಆಗಾಗ್ಗೆ ಬರುತ್ತಿರುತ್ತಾರೆ. ನಮ್ಮಿಬ್ಬರ ನಡುವೆ ಬಾಂದವ್ಯವಿದೆ. ರಾಜಕಾರಣವೇ ಬೇರೆ, ಬಾಂದವ್ಯವೇ ಬೇರೆ. ಅವರು ಕಾಂಗ್ರೆಸ್ ಸೇರುವುದಾಗಿ ಹೇಳಿಲ್ಲ, ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ನಾನು ಹೇಳಿಲ್ಲ.ನಾವು ನಮ್ಮ ಕೆಲಸ ಮಾಡಿಕೊಂಡು ಇದ್ದೇವೆ. ನಾವು ಬೆಳಗಾವಿ ಅಧಿವೇಶನ ಮುಗಿಸಿಕೊಂಡು ವಿಮಾನದಲ್ಲಿ ಒಟ್ಟಿಗೆ ಪ್ರಯಾಣ ಮಾಡಿದ್ದೆವು. ಆಗ ತೆಗೆದಿರುವ ಫೋಟೋ. ಅವರ ಪಕ್ಕದಲ್ಲಿ ಕೂತಿರುವುದರಲ್ಲೇನಿದೆ’ ಎಂದು ತಿಳಿಸಿದರು.

Share. Facebook Twitter WhatsApp Pinterest LinkedIn Tumblr Telegram Email

Related Posts

Code Of conduct: ಮಾಜಿ ಸಿಎಂ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ರಾ?! ಏನ್ ಹೇಳಿದ್ರು ಸಿದ್ದು!

March 29, 2023

“ಮತ್ತೆ ಘರ್ಜಿಸಲಿದೆ ಕರ್ನಾಟಕ”: ಹೊಸ ಕ್ಯಾಂಪೇನ್ ಲೋಗೊ ಬಿಡುಗಡೆ ಮಾಡಿದ ಕಾಂಗ್ರೆಸ್

March 29, 2023

Karnataka Assembly Election: ಕರ್ನಾಟಕ ಮತಹಬ್ಬಕ್ಕೆ ಮುಹೂರ್ತ ಫಿಕ್ಸ್..! ಮೇ 10 ಕ್ಕೆ ಮತದಾನ, 13ಕ್ಕೆ ಫಲಿತಾಂಶ

March 29, 2023

CM Ibrahim: 2023ರ ಚುನಾವಣೆಯಲ್ಲಿ HDK ಸಿಎಂ ಆಗದಿದ್ರೆ ನಾನು ರಾಜಕೀಯ ನಿವೃತ್ತಿ: ಸಿಎಂ ಇಬ್ರಾಹಿಂ

March 29, 2023

ಮತ್ತೆ ‘ಕೈ’ ಸೇರಲು ಮುಂದಾದ ಎ.ಬಿ.ಮಾಲಕರೆಡ್ಡಿ : ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಮತ್ತೊಂದು ಹೊಡೆತ

March 29, 2023

ಕಾಂಗ್ರೆಸ್‌ಗೆ ಬಿಗ್‌ ಶಾಕ್‌ ನೀಡಿದ ಹಾವೇರಿ ‘ಕೈ’ ಜಿಲ್ಲಾಧ್ಯಕ್ಷ: ಪಕ್ಷಕ್ಕೆ ಗುಡ್‌ಬೈ ಹೇಳಿದ ಎಂಎಂ ಹಿರೇಮಠ

March 29, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.