ದ್ರಾವಿಡ್ ಅವರ ಇಬ್ಬರು ಮಕ್ಕಳು ತಂದೆಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಹಿರಿಯ ಮಗ ಸಮಿತ್ ಹಾಗೂ ಕಿರಿಯ ಮಗ ಅನ್ವಯ್ ಕ್ರಿಕೆಟನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಸಮಿತ್ ಈ ಹಿಂದೆ ಅಂಡರ್-14 ತಂಡದಲ್ಲಿ ಸ್ಥಾನ ಪಡೆದಿದ್ದರು.
ಈ ವರ್ಷ ಜನವರಿಯಲ್ಲಿ ನಡೆದ 14 ವರ್ಷದೊಳಗಿನವರ ಅಂತರ ವಲಯ ಟೂರ್ನಿಯಲ್ಲಿ ಅನ್ವಯ್ ದ್ರಾವಿಡ್ ಅಂಡರ್ 14 ಕರ್ನಾಟಕ ತಂಡದ ನಾಯಕರಾಗಿದ್ದರು. 2019-20ರ ಅಂತರ ವಲಯ ಪಂದ್ಯಗಳಲ್ಲಿ ಅನ್ವಯ್ 2 ದ್ವಿಶತಕ ಹೊಡೆದಿದ್ದರು.
ಈ ಬಾರಿಯ ವಿನೂ ಮಂಕಡ್ (Vinoo Mankad) ಟೂರ್ನಿಯು ಅಕ್ಟೋಬರ್ 12 ರಿಂದ ಶುರುವಾಗಲಿದ್ದು, ಕರ್ನಾಟಕ ಅಂಡರ್ 19 (Under 19 Karnataka) ತಂಡವನ್ನು ಧೀರಜ್ ಗೌಡ ಮುನ್ನಡೆಸಲಿದ್ದು, ಧ್ರುವ್ ಪ್ರಭಾಕರ್ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.