ಉಡುಪಿ: ಉಡುಪಿಗೆ ಬಿಪರ್ ಜಾಯ್ ಚಂಡಮಾರುತ ಆತಂಕ ಹಿನ್ನಲೆ ಬೀಚ್ ಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಡುಕರೆ ಸಮುದ್ರ ತೀರದಲ್ಲಿ ಗಾಳಿ ವೇಗವಾಗಿ ಬೀಸುತ್ತಿದ್ದು, ಜೋರಾದ ಗಾಳಿಯ ಅಬ್ಬರದ ಮಧ್ಯೆ ರಕ್ಕಸ ಗಾತ್ರದ ಅಲೆಗಳ ಅಬ್ಬರ ಹೆಚ್ಚಾಗಿದೆ. ಚಂಡಮಾರುತ ಭೀತಿಯಿಂದ ಸಮುದ್ರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಖಡಕ್ ಸೂಚನೆ ನೀಡಲಾಗಿದೆ.
ಕರ್ನಾಟಕದ ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ (ಜೂ.09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ.