ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ “ವಿಶ್ವ ಪರಿಸರ ದಿನ” ಕಾರ್ಯಕ್ರಮದ ಅಂಗವಾಗಿ ಸನ್ಮಾನ್ಯ ಉಪ ಮುಖ್ಯಮಂತ್ರಿಯವರಾದ ಡಿ.ಕೆ. ಶಿವಕುಮಾರ್ ಅವರು ರಾಚೇನಹಳ್ಳಿ ಕೆರೆ ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದಾದ್ಯಂತ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಪರಿಸರ ಉಳಿಸುವ ಕೆಲಸ ಮಾಡುವ ಬಗ್ಗೆ ಜಾಗೃತಿ ಮೂಡಿಸಲಾಯಿತು. ವಿಶ್ವ ಪರಿಸರ ದಿನದ ಅಂಗವಾಗಿ ಪಾಲಿಕೆ ಶಾಲಾ ವಿದ್ಯಾರ್ಥಿಗಳಿಂದ ರಾಚೇನಹಳ್ಳಿ ಕೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಲ್ನಡಿಗೆ ಹಾಗೂ ಸೈಕಲ್ ಜಾಥ ಮೂಲಕ ನಾಗರಿಕರಲ್ಲಿ ಪರಿಸರ ಜಾಗೃತಿ ಮೂಡಿಸಲಾಯಿತು.
ಈ ವೇಳೆ ಮಾನ್ಯ ಕಂದಾಯ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೃಷ್ಣ ಭೈರೇಗೌಡ, ಮಾನ್ಯ ಶಾಸಕರಾದ ಎ.ಸಿ ಶ್ರೀನಿವಾಸ್, ಮಾನ್ಯ ವಿಧಾನ ಪರಿಷತ್ ಸದಸ್ಯರಾದ ನಾಗರಾಜ್, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಪ್ರೀತಿ ಗೆಹ್ಲೋಟ್, ಡಾ. ಹರೀಶ್ ಕುಮಾರ್, ಡಾ. ದೀಪಕ್, ರೆಡ್ಡಿ ಶಂಕರ ಬಾಬು, ಶ್ರೀ ಪಿ.ಎನ್.ರವೀಂದ್ರ, ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಸರೀನಾ ಸಿಕ್ಕಲಿಗರ್, ವಲಯ ಜಂಟಿ ಆಯುಕ್ತರಾದ ಶ್ರೀಮತಿ ಪೂರ್ಣಿಮಾ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.