ಟಾಲಿವುಡ್ ಸೂಪರ್ ಸ್ಟಾರ್ ಬಾಲಕೃಷ್ಣ ನಟನೆಯ ಡಾಕು ಮಹರಾಜ್ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಟೈಟಲ್ ಹಾಗೂ ಟ್ರೈಲರ್ ಮೂಲಕವೇ ಸದ್ದು ಮಾಡುತ್ತಿರುವ ಸಿನಿಮಾ ಇದೇ ಸಂಕ್ರಾಂತಿ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ. ಈ ಹಿನ್ನೆಲೆಯ್ಲಿ ‘ಡಾಕೂ ಮಹಾರಾಜ್’ ಚಿತ್ರರಂಗ ಪ್ರೀ ರಿಲೀಸ್ ಇವೆಂಟ್ ಗೆ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿತ್ತು. ಆದರೆ ಕೊನೆ ಕ್ಷಣದಲ್ಲಿ ಪ್ರೀರಿಲೀಸ್ ಈವೇಂಟ್ ಕ್ಯಾನ್ಸಲ್ ಮಾಡಲಾಗಿದೆ.
‘ಡಾಕೂ ಮಹಾರಾಜ್’ ಸಿನಿಮಾದ ನಾಯಕ ನಟ ನಂದಮೂರಿ ಬಾಲಕೃಷ್ಣ ಅವರು ‘ಡಾಕೂ ಮಹಾರಾಜ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಅನ್ನು ರದ್ದು ಮಾಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಅಸಲಿಗೆ ‘ಡಾಕೂ ಮಹಾರಾಜ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಜನವರಿ 09 ರಂದು ನಡೆಯಬೇಕಿತ್ತು. ಇದಕ್ಕಾಗಿ ಅನಂತಪುರದಲ್ಲಿ ಸಕಲ ತಯಾರಿಯನ್ನು ನಡೆಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಪ್ರೀ ರಿಲೀಸ್ ಇವೆಂಟ್ ಅನ್ನು ರದ್ದು ಮಾಡಲಾಗಿದೆ.
ತಿರುಪತಿಯಲ್ಲಿ ನಡೆದಿರುವ ಕಾಲ್ತುಳಿತ ಘಟನೆಯಲ್ಲಿ ಆರು ಮಂದಿ ನಿಧನ ಹೊಂದಿರುವ ಕಾರಣಕ್ಕೆ ಬಾಲಕೃಷ್ಣ ಅವರು ‘ಡಾಕೂ ಮಹಾರಾಜ್’ ಪ್ರೀ ರಿಲೀಸ್ ಇವೆಂಟ್ ಅನ್ನು ರದ್ದು ಮಾಡಿದ್ದಾರೆ. ತಿರುಪತಿಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಆರು ಮಂದಿ ನಿಧನ ಹೊಂದಿದ್ದು, ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳ ಆಗುವ ಆತಂಕ ವ್ಯಕ್ತಪಡಿಸಲಾಗಿದೆ. ಘಟನೆಗೆ ವಿಷಾಧ ಸೂಚಿಸಿರುವ ಬಾಲಕೃಷ್ಣ, ಪ್ರೀ ರಿಲೀಸ್ ಇವೆಂಟ್ ಅನ್ನು ರದ್ದು ಮಾಡಿ ಸೂಕ್ಷ್ಮತೆ ಮೆರೆದಿದ್ದಾರೆ. ಬಾಲಕೃಷ್ಣ ಅವರ ಈ ನಡೆಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಾಲಕೃಷ್ಣ ನಟನೆಯ ‘ಡಾಕೂ ಮಹಾರಾಜ್’ ಸಿನಿಮಾ ಜನವರಿ 12 ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ಊರ್ವಶಿ ರೌಟೆಲಾ, ಕನ್ನಡತಿ ಶ್ರದ್ಧಾ ಶ್ರೀನಾಥ್ ನಟಿಸಿದ್ದು, ವಿಲನ್ ಆಗಿ ಬಾಬಿ ಡಿಯೋಲ್ ಮಿಂಚಿದ್ದಾರೆ.