ಬೆಂಗಳೂರು: ಉಚಿತ ಯೋಜನೆಗಳನ್ನು ಜಾರಿಗೆ ತರುವುದರಲ್ಲೇ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಮಾತ್ರ ಗ್ಯಾರಂಟಿ ಎಂದು ಮಾಜಿ ಇಂಧನ ಸಚಿವ ಸುನೀಲ್ ಕುಮಾರ್ ಟೀಕಿಸಿದ್ದಾರೆ.
ಕಾಂಗ್ರೆಸ್ ಉಚಿತ ಗ್ಯಾರಂಟಿಗಳ ಕುರಿತು ಸರಣೀ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದು, ಜನರಿಗೆ ಕತ್ತಲೆ ಭಾಗ್ಯ ನೀಡೋದು ಗ್ಯಾರಂಟಿ ಎಂದು ಲೇವಡಿ ಮಾಡಿದ್ದಾರೆ.
ರೈತರ ಐಪಿ ಸೆಟ್ ಗಳಿಗೆ ನಿರಂತರ ಏಳು ಗಂಟೆಗಳ ಕಾಲ ಪೂರೈಕೆ ಮಾಡುತ್ತಿದ್ದ ವಿದ್ಯುತ್ ಕಡಿತಗೊಳಿಸಲಾಗಿದೆ.ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅನಿಯಮಿತ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ ಪ್ರಾರಂಭವಾಗಿದೆ. ನಿರ್ವಹಣೆ ಹೆಸರಿನಲ್ಲಿ ಪವರ್ ಕಟ್ ಕಣ್ಣಾಮುಚ್ಚಾಲೆ ನಡೆಸುತ್ತಿರುವುದು ಸುಳ್ಳೇ? ಎಂದು ಟೀಕಿಸಿದರು.