ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ನ್ಯಾಯಾಂಗ ಬಂಧನ ಇಂದು ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಇಂದು ಕೋರ್ಟ್ ಗೆ ಹಾಜರುಪಡಿಸಬೇಕಿತ್ತು. ಆದರೆ, ಇಂದು ದರ್ಶನ್ ಅವರು ನೇರವಾಗಿ ಕೋರ್ಟ್ಗೆ ಬರುತ್ತಿಲ್ಲ, ಬದಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಲಿದ್ದಾರೆ.
ದರ್ಶನ್ ಅವರನ್ನು ಮೂರು ಭಾರಿ ಕಸ್ಟಡಿಗೆ ಪಡೆದಿದ್ದ ಪೊಲೀಸರು ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಈ ವೇಳೆ ಪೊಲೀಸರು ಸಾಕಷ್ಟು ಮಹತ್ವದ ಮಾಹಿತಿಯನ್ನು ಕಲೆ ಹಾಕಲಿದ್ದಾರೆ. ಇಂದಿಗೆ ನ್ಯಾಯಾಂಗ ಬಂಧನ ಮುಗಿದಿದ್ದು ಇಂದು ಕೋರ್ಟ್ ಗೆ ಹಾಜರು ಪಡಿಸಬೇಕಿತ್ತು. ಆದ್ರೆ ದರ್ಶನ್ ಕೋರ್ಟ್ ಗೆ ಬರುವ ಬದಲು ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಲಿದ್ದಾರೆ.
ಇಂದು ಅವರ ಪಾಲಿಗೆ ಮಹತ್ವದ ದಿನ ಆಗಿದೆ. ಅವರು ಜೈಲಿನಿಂದ ಹೊರ ಬರುತ್ತಾರೋ ಅಥವಾ ಜೈಲಿನಲ್ಲಿ ಉಳಿಯುತ್ತಾರೋ ಎಂಬುದು ತಿಳಿಯಲಿದೆ. ದರ್ಶನ್ ಕೋರ್ಟ್ ಗೆ ಬರ್ತಾರೆ ಎಂದು ಗೊತ್ತಾಗುತ್ತಿದ್ದಂತೆ ಅಭಿಮಾನಿಗಳು, ಮಾದ್ಯಮದವರು ಮುಗಿ ಬೀಳುತ್ತಾರೆ. ಅಂತೆಯೇ ಕಳೆದ ಭಾರಿ ಅಭಿಮಾನಿಗಳನ್ನು ಕಂಟ್ರೋಲ್ ಮಾಡಲು ಪೊಲೀಸರು ಹರ ಸಾಹಸ ಪಡಬೇಕಾಯ್ತು. ಇದೇ ಕಾರಣಕ್ಕೆ ಈ ತೊಂದರೆಯೇ ಬೇಡ ಎಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಅವರ ವಿಚಾರಣೆ ಮಾಡಲು ನಿರ್ಧರಿಸಲಾಗಿದೆಯೇ ಎನ್ನಲಾಗುತ್ತಿದೆ.
ಈ ಬಗ್ಗೆ ಪವಿತ್ರಾ ಗೌಡ ಪರ ವಕೀಲರು ಮಾಹಿತಿ ನೀಡಿದ್ದಾರೆ. ‘ಇಂದು ವಿಚಾರಣೆಗೆ ನ್ಯಾಯಾಲಯಕ್ಕೆ ಆರೋಪಿಗಳು ಹಾಜರಾಗುವುದಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ’ ಎಂದಿದ್ದಾರೆ. ಈ ಪ್ರಕರಣದಲ್ಲಿ ಸದ್ಯ ತನಿಖೆ ನಡೆಯುತ್ತಿದೆ. ದರ್ಶನ್ ಅವರು ಪ್ರಭಾವಿ ವ್ಯಕ್ತಿ. ಅವರು ಹೊರ ಬಂದರೆ ಸಾಕ್ಷಿ ನಾಶ ಆಗಬಹುದು. ಹೀಗಾಗಿ, ಅವರಿಗೆ ಜಾಮೀನು ಸಿಗೋದು ಅನುಮಾನ ಎಂದು ಹೇಳಲಾಗುತ್ತಿದೆ.