ರೇಣುಕಾಸ್ವಾಮಿ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ರನ್ನು ಬಂಧಿಸಲಾಗಿದೆ. ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಇದರ ಮೇಲೆ ಇನ್ನಷ್ಟು ತನಿಖೆ ನಡೆಯಬೇಕಿದೆ. ಅಲ್ಲಿಯವರೆಗೂ ಇದರ ಬಗ್ಗೆ ಏನು ಹೇಳೋಕೆ ಆಗಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ಈ ಕೇಸ್ನಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರಾ ಇಲ್ವಾ? ಯಾವ ಕಾರಣ ಕೊಲೆ ನಡೆದಿದೆ ಎಂದು ಇನ್ನೂ ತನಿಖೆ ಬಳಿಕ ತಿಳಿಯಬೇಕಿದೆ. ಈ ಸಂದರ್ಭದಲ್ಲಿ ಹೆಚ್ಚೇನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.