ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ 4 ತಿಂಗಳಾಗಿದೆ. ನಿತ್ಯವು ದಾಸ ಹೊರಗೆ ಬರುವ ದಾರಿ ಹುಡುಕುತ್ತಿದ್ದಾರೆ. ಇದಕ್ಕಾಗಿ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಂದು ನಡೆದ ಜಾಮೀನು ಅರ್ಜಿ ವಿಚಾರಣೆಯಲ್ಲಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.
ವಾದ ಮಂಡನೆಗೆ ಕಾಲಾವಕಾಶವನ್ನು ದರ್ಶನ್ ಪರ ವಕೀಲರು ಕೇಳಿದ ಕಾರಣದಿಂದಾಗಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಈ ಹಿಂದೆ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಪರ ವಕೀಲರು, ಎಸ್ಪಿಪಿ ಪ್ರಸನ್ನ ಅವರು ಆಕ್ಷೇಪಣೆ ಸಲ್ಲಿಸಲು ತಡ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈಗ ಆಕ್ಷೇಪಣೆ ಸಲ್ಲಿಸಿದ ಮೇಲೆ ತಾವೇ ಈಗ ವಿಚಾರಣೆಯನ್ನು ಮುಂದೂಡಿದ್ದಾರೆ.
ಪ್ರಕರಣದಲ್ಲಿ ಖುದ್ದು ಹಿರಿಯ ವಕೀಲರು ಸಿವಿ ನಾಗೇಶ್ ಅವರು ಬರಬೇಕಾಗಿದ್ದು, ಅವರು ಬರದೇ ಇರುವ ಕಾರಣಕ್ಕೆ ಅವರ ಸಹಾಯಕ ವಕೀಲರು ಪ್ರಕರಣದಲ್ಲಿ ಇನ್ನಷ್ಟು ದಿನದ ಕಾಲಾವಕಾಶವನ್ನು ಕೇಳಿದ್ದಾರೆ. ವಾದ ಮಂಡನೆಗೆ ದರ್ಶನ್ ಪರ ವಕೀಲರು ಕಾಲಾವಕಾಶ ಕೇಳಿದ ಬೆನ್ನಲ್ಲೆ, ಎಸ್ಪಿಪಿ ಪ್ರಸನ್ನ ಅವರು ಮಾತನಾಡಿ, ‘ಆಕ್ಷೇಪಣೆ ಸಲ್ಲಿಸಿಲ್ಲವೆಂದು ದರ್ಶನ್ ವಕೀಲರು ತಕರಾರು ತೆಗೆಯುತ್ತಿದ್ದರು…. ಈಗ ಆಕ್ಷೇಪಣೆ ಸಲ್ಲಿಸಿದ್ದೇವೆ ವಾದ ಮಂಡನೆಗೆ ಸಿದ್ದ ಇದ್ದೇವೆ’ ಎಂದು ಕೋರ್ಟ್ಗೆ ಹೇಳಿದರು. ಆದರೆ ದರ್ಶನ್ ಪರ ವಕೀಲರು ಸಮಯ ಕೇಳಿದ್ದರಿಂದ ಸೆಪ್ಟೆಂಬರ್ 30ಕ್ಕೆ ವಿಚಾರಣೆಯನ್ನು ನ್ಯಾಯಾಧೀಶರು ಮುಂದೂಡಿದರು.
ಇದೇ ತಿಂಗಳ 21ರಂದು ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಗೆ ತಕರಾರು ಸಲ್ಲಿಸಲು ಎಸ್ಪಿಪಿ ಅವರು ತಡ ಮಾಡಿದ್ದ ಕಾರಣ ಎರಡು ಬಾರಿ ವಿಚಾರಣೆ ಮುಂದೂಡಿ ಸೆಪ್ಟೆಂಬರ್ 27ಕ್ಕೆ ವಿಚಾರಣೆ ನಿಗದಿಯಾಗಿತ್ತು. ಆದರೆ ಇಂದು ದರ್ಶನ್ ಪರ ವಕೀಲರೆ ವಿಚಾರಣೆಗೆ ಕಾಲಾವಕಾಶ ಕೋರಿದ ಕಾರಣ ಪ್ರಕರಣವನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.