ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ 125 ದಿನ ಕಳೆದಿದೆ. ದರ್ಶನ್ ಸೋಮವಾರವಾದ್ರು ಹೊರಗೆ ಬರ್ತಾರೆ ಎಂದುಕೊಂಡವರಿಗೆ ಬಿಗ್ ಶಾಕ್ ನೀಡಿದೆ. ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಇದರಿಂದ ಸದ್ಯದ ಮಟ್ಟಿಗೆ ದರ್ಶನ್ ಜೈಲಿನಿಂದ ಹೊರಬರುವುದು ಅನುಮಾನವೇ ಆಗಿದೆ.
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಅರಾಮಾಗಿದ್ದರು. ಕೆಲವೊಂದು ರೌಡಿಗಳ ಜೊತೆ ಸ್ನೇಹ ಬೆಳೆಸಿಕೊಂಡು ಬೇಕಾಗಿದ್ದು ತರಿಸಿಕೊಂಡು ತಿಂದು ಉಂಡು ನೆಮ್ಮದಿಯಾಗಿದ್ದರು. ಆದ್ರೆ ಯಾವಾಗ ದರ್ಶನ್ ರಾಜಾತಿಥ್ಯ ಪಡೆಯುತ್ತಿರುವ ಫೋಟೋ ವೈರಲ್ ಆಯ್ತೋ ಆಗಲೇ ದರ್ಶನ್ ಗೆ ನರಕ ಶುರುವಾಗಿದ್ದು. ಪರಪ್ಪನ ಅಗ್ರಹಾರ ಜೈಲಿನಿಂದ ಡೈರೆಕ್ಟ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಬಳ್ಳಾರಿ ಜೈಲಿಗೆ ಹೋದ ನಂತರ ಅವರಿಗೆ ಆರೋಗ್ಯ ಸಮಸ್ಯೆ ಹೆಚ್ಚಾಯಿತು. ಹಾಗಾಗಿ ಆದಷ್ಟು ಬೇಗ ಜಾಮೀನು ಪಡೆಯಬೇಕು ಎಂದು ಅವರು ಪ್ರಯತ್ನ ನಡೆಸಿದ್ದರು. ಆದರೆ ಅವರ ಪ್ರಯತ್ನಕ್ಕೆ ಫಲ ಸಿಕ್ಕಿಲ್ಲ. ದರ್ಶನ್ ಅವರ ಜಾಮೀನು ಅರ್ಜಿಯನ್ನು ಸೋಮವಾರ 57ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.
ದರ್ಶನ್ ಜಾಮೀನು ಅರ್ಜಿ ವಜಾಗೊಂಡ ಬಳಿಕ ನಟನ ಮುಂದೆ ಒಂದಷ್ಟು ಆಯ್ಕೆಗಳು ಇವೆ. ಅವುಗಳಲ್ಲಿ ಮೂರು ಆಯ್ಕೆಗಳು ಪ್ರಮುಖವಾಗಿದೆ.
- ಜಾಮೀನು ಕೋರಿ ಹೈಕೋರ್ಟ್ಗೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ.
- ಅನಾರೋಗ್ಯದ ಕಾರಣವನ್ನು ನೀಡಿ 57ನೇ ಸಿಸಿಹೆಚ್ ಕೋರ್ಟ್ನಲ್ಲಿಯೇ ಮತ್ತೊಮ್ಮೆ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಅನಾರೋಗ್ಯಕ್ಕೆ ಚಿಕಿತ್ಸೆಗಾಗಿ ಪ್ರತ್ಯೇಕ ರಿಟ್ ಅರ್ಜಿ ಸಲ್ಲಿಸಬಹುದು. ಸ್ವಂತ ವೆಚ್ಚದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೂ ದರ್ಶನ್ ಮನವಿ ಮಾಡಬಹುದಾಗಿದೆ.
ಸದ್ಯ ಬಳ್ಳಾರಿ ಜೈಲಿನಲ್ಲಿ ದರ್ಶನ್ ಜೈಲು ವಾಸ ಮುಂದುವರೆದಿದೆ. ತನಗೆ ಜಾಮೀನು ಸಿಗತ್ತೋ ಇಲ್ಲವೋ ಎಂಬ ಚಿಂತೆಯಲ್ಲಿಯೇ ಕಾಲ ಕಳೆಯುತ್ತಿದ್ದರು. ಸೋಮವಾರ ತನಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ನಿರೀಕ್ಷೆಯಲ್ಲಿದ್ದ ದಾಸನಿಗೆ ಬಿಗ್ ಶಾಕ್ ಎದುರಾಗಿದೆ. ಇತ್ತ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೂ ಜಾಮೀನು ಅರ್ಜಿ ವಜಾ ಮಾಡಲಾಗಿದೆ.