ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ತುರ್ತು ನೋಟಿಸ್ ನೀಡಿದೆ.
ಡಿಕೆ ಶಿವಕುಮಾರ್ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕನಕಪುರ ನ್ಯಾಯಾಲಯದ ವ್ಯಾಪ್ತಿಯಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡಿ. ಯಾಕೆಂದರೆ ಡಿಕೆ ಶಿವಕುಮಾರ್ ಬಲಾಢ್ಯರು. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡುತ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡಿ ಎಂದು ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
ಯತ್ನಾಳ್ ಅವರ ಹೇಳಿಕೆಯಿಂದ ನನ್ನ ಘನತೆ ಮತ್ತು ವರ್ಚಸ್ಸಿಗೆ ಹಾನಿಯಾಗಿದ್ದು, 204 ಕೋಟಿ ಪರಿಹಾರ ನೀಡುವಂತೆ ಆದೇಶಿಸಬೇಕು ಎಂದು ಕೋರಿ ಶಿವಕುಮಾರ್, ರಾಮನಗರ ಜಿಲ್ಲೆಯ ಕನಕಪುರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು