ಕ್ರೀಡೆಗೆ ರಾಜಕಾರಣಿಗಳು ಅಪಾಯಕಾರಿ, ಕ್ರಿಕೆಟ್ ಆಟವನ್ನ ರಾಜಕಾರಣಿಗಳಿಂದ ದೂರವಿಡಿ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಕ್ರೀಡೆಗೆ ರಾಜಕಾರಣಿಗಳು ಅಪಾಯಕಾರಿ, ಹೀಗಾಗಿ ಕ್ರೀಡಾ ಚಟುವಟಿಕೆಗಳಿಂದ ಅವರನ್ನು ದೂರ ಇಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ.
ನಾನೊಬ್ಬ ರಾಜಕಾರಣಿ, ಆದರೂ ಕಿರ್ಮಾನಿ ಅವರು ಈ ಕಾರ್ಯಕ್ರಮಕ್ಕೆ ನನಗೆ ಏಕೆ ಆಹ್ವಾನ ನೀಡಿದರೋ ಗೊತ್ತಿಲ್ಲ ಎಂದರು. ಕ್ರೀಡೆ ಪ್ರತಿಭೆ ನಿಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಆ ಉನ್ನತ ಸ್ಥಾನವನ್ನು ಉಳಿಸಿಕೊಳ್ಳಲು ಒಳ್ಳೆಯ ಗುಣ ಕಲಿಸಲು ಸಹಾಯ ಮಾಡುತ್ತದೆ. ಕಿರ್ಮಾನಿ ಅವರು ಈ ಎರಡೂ ಗುಣಗಳನ್ನು ಹೊಂದಿದ್ದಾರೆ ಎಂದು ಶ್ಲಾಘಿಸಿದರು.