ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಡಿಕೆ ಶಿವಕುಮಾರ್ ಫುಲ್ ಆಕ್ಟೀವ್ ಆಗಿದ್ದಾರೆ. ಇಂದು ಬೆಂಗಳೂರು ಪಾಲಿಕೆ ಮಾಜಿ ಮೇಯರ್ಗಳ ಜೊತೆ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ .
ಯಾವ ರೀತಿ ಅಭಿವೃದ್ಧಿ ಮಾಡಬಹುದು ಅಂತಾ ಸಲಹೆ ಕೇಳಿದ್ದೇನೆ. ರಿಂಗ್ರೋಡ್ಗಳಲ್ಲಿ ರಸ್ತೆ ಬದಿ, ಕೆರೆಗಳಲ್ಲಿ ಕಸ ಎಸೆಯುತ್ತಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಸಲಹೆಗಳನ್ನು ಕೇಳಿದ್ದಾರೆ ಎಂದು ಹೇಳಿದರು.
ಬಳಿಕ ಮಾತನಾಡಿದ ಡಿಕೆಶಿ, ” ಬೆಂಗಳೂರು ಅಭಿವೃದ್ಧಿಗಾಗಿ ಹೇಗೆ ಹಣ ಸಂಗ್ರಹ ಮಾಡಬಹುದು. ಎಲ್ಲಿ ನ್ಯೂನ್ಯತೆಗಳಿವೆ, ತ್ಯಾಜ್ಯ ನಿರ್ವಹಣೆ, ರಸ್ತೆಗಳಲ್ಲಿ ಕಸ ಹಾಕುತ್ತಿರುವ ಬಗ್ಗೆ ಚರ್ಚೆ ಮಾಡಿದ್ದೇವೆ.ಇದನ್ನು ಹೇಗೆ ತಡೆಯಬಹುದು ಎಂದು ಸಲಹೆ ಪಡೆದಿದ್ದು, ಕಸದ ವಾಹನ ಟ್ರ್ಯಾಕ್ ಮಾಡುವುದು, ಕಸವನ್ನು ಎಲ್ಲೆದರಲ್ಲಿ ಎಸೆಯುವ ವಾಹನಗಳಿಗೆ ಯಾವ ರೀತಿ ದಂಡ ವಿಧಿಸಬೇಕು, ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಿದ್ದೇನೆ. ಸದಸ್ಯದಲ್ಲೇ ಇದನ್ನು ನಿಯಂತ್ರಿಸಲು ಯಾವ ಸೂಚನೆ ನೀಡಬೇಕು ಎಂದು ಅಧಿಕಾರಿಗಳ ಜತೆ ಸಭೆ ಮಾಡಿ ತೀರ್ಮಾನಿಸುತ್ತೇನೆ ” ಎಂದರು.