ಉಪ ಮುಖ್ಯಮಂತ್ರಿ ರೇಸಲ್ಲಿ ತಮ್ಮ ಹೆಸರು ಕೇಳಿ ಬರುತ್ತಿರುವ ಬಗ್ಗೆ ಸಚಿವ ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು ನನ್ನ ಮನಸ್ಸಿನಲ್ಲಿರೋದನ್ನ ಹೈಕಮಾಂಡಿಗೆ ಮಾತ್ರ ಹೇಳ್ತೀನಿ.
ಮಾದ್ಯಮದರ ಮುಂದೆ ಯಾಕೆ ಹೇಳಬೇಕು ಎಂದು ಹೇಳುವ ಮೂಲಕ ಡಿಸಿಎಂ ಸ್ಥಾನದ ಬಗ್ಗೆ ಮಾದ್ಯಮದವರು ಕೇಳಿದ ಪ್ರಶ್ನೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಡಿಸಿಎಂ ಸ್ಥಾನ ಸಾಂವಿಧಾನಿಕ ಹುದ್ದೆಯಲ್ಲ, ದಲಿತ ಕೋಟಾ ಆ ಕೋಟಾ ಇಲ್ಲ ಎಂದರು. ಉಪಮುಖ್ಯಮಂತ್ರಿ ಸ್ಥಾನಕ್ಕೆ ದಲಿತರಲ್ಲಿ ಅನೇಕರು ಸಮರ್ಥರಿದ್ದಾರೆ. ಆ ಸಾಮರ್ಥ್ಯದ ಮೇಲೆ ಡಿಸಿఎం ಸ್ಥಾನ ದಿನ ಕೊಡಬೇಕು ಎಂದು ಪರೋಕ್ಷವಾಗಿ ಮೂವರು ಡಿಸಿಎಂ ಕೂಗಿಗೆ ಸಹಮತ ವ್ಯಕ್ತಪಡಿಸಿದರು.