ಲಿಬಿಯಾ ಕರಾವಳಿಯ ಬಳಿ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಲ್ಲಿದ್ದ 160ಕ್ಕೂ ಅಧಿಕ ವಲಸಿಗರನ್ನು ರಕ್ಷಿಸಲಾಗಿದೆ. ಆದರೆ 11 ವಲಸಿಗರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಅವರ ಮೃತದೇಹಗಳನ್ನು ಪತ್ತೆಹಚ್ಚಿರುವುದಾಗಿ ಸ್ವಯಂಸೇವಾ ಸಂಸ್ಥೆ `ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್‘ ಹೇಳಿದೆ.
ಲಿಬಿಯಾ ಕಡಲ ತೀರದ ಬಳಿ ಮುಳುಗುತ್ತಿದ್ದ ದೋಣಿಯಲ್ಲಿದ್ದ 146 ಮಂದಿಯನ್ನು ರಕ್ಷಣಾ ಕಾರ್ಯಕರ್ತರ ದೋಣಿ ರಕ್ಷಿಸಿದೆ. ಮತ್ತೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಉಳಿದ 20 ವಲಸಿಗರನ್ನು ರಕ್ಷಿಸಿ ದಡ ಸೇರಿಸಲಾಗಿದೆ. ಈ ಮಧ್ಯೆ, ರಕ್ಷಣಾ ಕಾರ್ಯಕ್ಕೆ ಬಳಸಲಾಗಿದ್ದ ಹೆಲಿಕಾಪ್ಟರ್ ಸಮುದ್ರದಲ್ಲಿ ತೇಲುತ್ತಿದ್ದ 11 ಮೃತದೇಹಗಳನ್ನು ಪತ್ತೆಹಚ್ಚಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮೃತದೇಹಗಳನ್ನು ದಡಕ್ಕೆ ತರಲಾಗಿದೆ ಎಂದು ತಿಳಿಸಿದೆ.