ಬೆಂಗಳೂರು: ಬೆಂಗಳೂರಿನ ಮೆಜೆಸ್ಟಿಕ್ನ ಬಸ್ ನಿಲ್ದಾಣದಲ್ಲಿ ನಿವೃತ್ತ ಪೊಲೀಸ್ ಸಿಬ್ಬಂದಿಯೊಬ್ಬರ ಶವ ಪತ್ತೆ ಆಗಿರುವ ಘಟನೆ ಜರುಗಿದೆ. 65 ವರ್ಷದ ಮುನಿಆಂಜಿನೇಯ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೊಸಹಳ್ಳಿ ನಿವಾಸಿ ಮುನಿಆಂಜಿನೇಯ, ಗೆಳೆಯರ ಜೊತೆ ಧರ್ಮಸ್ಥಳಕ್ಕೆ ಹೋಗಿ ಬರ್ತೀನಿ ಎಂದು ಮನೆಯಲ್ಲಿ ಹೇಳಿ ಹೊರಟಿದ್ದರು.
ಆದ್ರೆ ಇಂದು ಮೆಜೆಸ್ಟಿಕ್ನಲ್ಲಿ ಶವ ಪತ್ತೆಯಾಗಿದೆ. ದೇವರ ದರ್ಶನಕ್ಕೆಂದು ಹೋಗುವುದಾಗಿ ಹೇಳಿ ಹೊರಟ ಮುನಿಆಂಜಿನೇಯನವರು ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮುನಿಆಂಜಿನೇಯ ನಿನ್ನೆ ಮಧ್ಯಾಹ್ನ 2 ಗಂಟೆಗೆ ಮನೆಯಿಂದ ತೆರಳಿದ್ದರು. ಇಂದು ಬೆಳಗಿನ ಜಾವ 3 ಗಂಟೆಗೆ ಶವವಾಗಿ ಸಿಕ್ಕಿದ್ದಾರೆ. ಇನ್ನು ಬಸ್ ನಿಲ್ದಾಣದಲ್ಲಿ ಗೆಳೆಯರಿಗಾಗಿ ಕಾದು ಕುಳಿತಿದ್ದಾಗ ಸಾವು ಸಂಭವಿಸಿದೆ ಎನ್ನಲಾಗುತ್ತಿದೆ. ನಿವೃತ್ತ ಪೊಲೀಸ್ ಸಿಬ್ಬಂದಿ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಮುನಿಆಂಜಿನೇಯ ಬಳಿ ಇದ್ದ ನಗದು ಹಾಗೂ ಚಿನ್ನಾಭರಣ ನಾಪತ್ತೆಯಾಗಿದೆ. ಮುನಿಆಂಜಿನೇಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.