ಉತ್ತರ ಕನ್ನಡ: ರಾಜ್ಯದಲ್ಲಿ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆದಿದೆ. ಸಿಎಂ ಬೊಮ್ಮಾಯಿ ಇಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಹಿನ್ನೆಲೆ ಬನವಾಸಿಯ ರಸ್ತೆ ಉದ್ದಕ್ಕೂ ‘ಪೇ ಸಿಎಂ’ ಪೋಸ್ಟರ್ ಅಳವಡಿಸಲಾಗಿದೆ. ಸಿಎಂ ಸಂಚರಿಸುವ ರಸ್ತೆ ಬದಿಯಲ್ಲಿನ ಮರಗಳಿಗೆ ‘ಡೀಲ್ ನಿಮ್ಮದು ಕಮಿಷನ್ ನಮ್ದು’ ಎಂಬ ಬರಹವುಳ್ಳ ಪೋಸ್ಟರ್ ಅಳವಡಿಸಲಾಗಿದೆ. ರಸ್ತೆ ಪಕ್ಕದ ಕಟ್ಟಡಗಳಿಗೆ ಸಚಿವ ಹೆಬ್ಬಾರ್ ಫೋಟೋ ಅಳವಡಿಸಲಾಗಿದೆ.
ಕಂದಬೋತ್ಸವ ಹಾಗೂ ವಿವಿಧ ಕಾರ್ಯಕ್ರಮಕ್ಕಾಗಿ ಮಂಗಳವಾರ ಸಂಜೆ ಶಿರಸಿ ಮತ್ತು ಸಿದ್ದಾಪುರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆಸಲಾಗಿದೆ. ಪೇ ಸಿಎಂ ಜತೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿರುದ್ಧ ಪೋಸ್ಟರ್ ಗಳನ್ನ ಅಂಟಿಸಲಾಗಿದೆ.