ಬೆಳಗಾವಿ: ತಹಸೀಲ್ದಾರ್ ಕಚೇರಿಯಲ್ಲಿ ತಹಶಿಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕಸಹಾಯಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶಿಲ್ದಾರ್ ಆಫೀಸ್ನಲ್ಲಿ ನಡೆದಿದೆ. ತಹಶಿಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರನಾಗಿದ್ದಾರೆ.
ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಯಲ್ಲಿಯೇ ನೇಣುಬಿಗಿದುಕೊಂಡಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇನ್ನು ಸರ್ಕಾರಿ ನೌಕರ ಆತ್ಮಹತ್ಯೆಗೆ ಶರಣಾಗುವ ಮುನ್ನ ರಾಜ್ಯ ಸರ್ಕಾರದ ಪ್ರಭಾವಿ ಸಚಿವರ ಆಪ್ತ ಸಹಾಯಕನ (ಪಿಎ) ಹೆಸರು ಬರೆದಿಟ್ಟಿದ್ದಾರೆ. ಬೆಳಗಾವಿಯ ತಹಶಿಲ್ದಾರ್ ಬಸವರಾಜ್ ನಾಗರಾಳ ಚೇಂಬರ್ನಲ್ಲಿಯೇ ಕೆಲಸ ಮಾಡುತ್ತಿದ್ದ ಎಫ್ಡಿಸಿ ರುದ್ರಣ್ಣ ಯಡಣ್ಣವರ ಇದೇ ಬೆಳಗಾವಿ ಜಿಲ್ಲೆಯ ರಾಯಭಾಗ ಮೂಲದರಾಗಿದ್ದರು. ಇನ್ನು ನೌಕರ ಬರೆದಿಟ್ಟಿದ್ದ ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂದಿದ್ದಾರೆ. ಘಟನಾ ಸ್ಥಳಕ್ಕೆ ತಹಶಿಲ್ದಾರ್, ಖಡೇಬಜಾರ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.