ನವದೆಹಲಿ ;– ಅಕ್ಕಿ ಬದಲು ಹಣ ನೀಡಲು ಘೋಷಿಸಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ವ್ಯಾಪಕ ಟೀಕೆ ವ್ಯಕ್ತಪಡಿಸಿದೆ.
ಈ ಸಂಬಂಧ ದೆಹಲಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಅಕ್ಕಿ ಸಿಗದಿದ್ರೆ ಹಣ ನೀಡುವಂತೆ ಬಿಜೆಪಿಯವರೇ ಸಲಹೆ ನೀಡಿದ್ದರು. ತಾತ್ಕಾಲಿಕವಾಗಿ ಅಕ್ಕಿ ಬದಲು ನಾವು ಜನರಿಗೆ ಹಣ ನೀಡುತ್ತಿದ್ದೇವೆ. ನಮ್ಮ ರಾಜ್ಯದಲ್ಲೇ ಅಕ್ಕಿ ಸಂಗ್ರಹ ಮಾಡಲು ಚಿಂತನೆ ಇದೆ ಎಂದು ಹೇಳಿದರು.
5 ಕೆಜಿ ಸೇರಿ 10 ಕೆಜಿ ಅಕ್ಕಿ ಕೊಡುವುದಾಗಿ ಮಾತು ಕೊಟ್ಟಿದ್ದೆವು. ಕೊಟ್ಟ ಮಾತು ಉಳಿಸಿಕೊಳ್ಳಲು ಜನರ ಖಾತೆಗೆ ಹಣ ವರ್ಗಾವಣೆ ಮಾಡಲು ಮುಂದಾಗಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.